fbpx
ಸಮಾಚಾರ

ಅಶ್ಲೀಲ ಟ್ವೀಟ್: ಸೈನಾ ನೆಹ್ವಾಲ್​ಗೆ ಬಹಿರಂಗ ಕ್ಷಮೆ ಕೇಳಿದ ನಟ ಸಿದ್ಧಾರ್ಥ್!

ಇತ್ತೀಚೆಗೆ ಸಿದ್ದಾರ್ಥ್ ಅವರು ಬ್ಯಾಡ್ಮಿಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಗ್ಗೆ ಆಕ್ಷೇಪಾರ್ಹವಾಗಿ ಟ್ವೀಟ್​ ಮಾಡಿದ್ದರು. ಅದಕ್ಕೆ ಅನೇಕರಿಂದ ಖಂಡನೆ ವ್ಯಕ್ತವಾಗಿತ್ತು. ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಈ ಟ್ವೀಟ್​ ಇದೆ ಎಂದು ನೆಟ್ಟಿಗರು ಸಿದ್ದಾರ್ಥ್ ವಿರುದ್ಧ ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದಾರ್ಥ್​ ಅವರು ಕ್ಷಮೆ ಕೇಳಿದ್ದಾರೆ. ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡು ಬಹಿರಂಗವಾಗಿಯೇ ಪತ್ರ ಬರೆದಿದ್ದಾರೆ. ಆ ಪತ್ರವನ್ನು ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

 

 

ಪತ್ರದಲ್ಲೇನಿದೆ?
‘ಡಿಯರ್ ಸೈನಾ, ನನ್ನ ಒರಟು ಜೋಕ್‌ ಬಗ್ಗೆ ನಾನು ಕ್ಷಮೆ ಕೇಳುತ್ತೇನೆ. ನಿನ್ನ ಅಭಿಪ್ರಾಯಕ್ಕೆ ಪ್ರತಿಯಾಗಿ ನಾನು ಮಾಡಿದ ಒರಟು ಜೋಕ್‌ ಬಗ್ಗೆ ಕ್ಷಮೆ ಕೇಳುತ್ತೇನೆ. ನಿಮ್ಮೊಂದಿಗೆ ಅನೇಕ ವಿಷಯಗಳ ಬಗ್ಗೆ ನನಗೆ ಭಿನ್ನಾಭಿಪ್ರಾಯ ಇರಬಹುದು. ಆದರೆ ನಿಮ್ಮ ಟ್ವೀಟ್‌ಗೆ ಪ್ರತಿಯಾಗಿ ನಾನು ಮಾಡಿದ ಟ್ವೀಟ್‌ ಅದಕ್ಕೆ ಬಳಸಿದ ಪದಗಳು ಸೂಕ್ತವಾಗಿರಲಿಲ್ಲ. ಸ್ವತಃ ನಾನು ಅಷ್ಟು ಕೆಳಮಟ್ಟದವನಲ್ಲ ಎಂಬ ನಂಬಿಕೆ ನನಗೆ ಇದೆ’ ಎಂದು ಸಿದ್ದಾರ್ಥ್ ಬರೆದುಕೊಂಡಿದ್ದಾರೆ.

ಏನಿದು ವಿವಾದ:
ಇತ್ತೀಚಿಗೆ ಪ್ರಧಾನಿ ಮೋದಿ ಪಂಜಾಬ್ ಭೇಟಿ ವೇಳೆ ಸಂಭವಿಸಿದ ಭದ್ರತಾ ಲೋಪದ ಬಗ್ಗೆ ಸೈನಾ ನೆಹ್ವಾಲ್ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಪ್ರತಿಯಾಗಿ ಸಿದ್ಧಾರ್ಥ್ ಅಸಭ್ಯ ಹಾಸ್ಯದ ಟ್ವೀಟ್ ಮಾಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top