ಬಾಲಿವುಡ್ ನಟಿ ಪ್ರಿಯಾಂಕಾ ಮತ್ತು ನಿಕ್ ಜೋನಸ್ ದಂಪತಿ ಇದೀಗ ಮೊದಲ ಮಗುವಿನ ಸಂಭ್ರಮದಲ್ಲಿದ್ದಾರೆ. ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ಆರೂವರೆ ತಿಂಗಳಿಗೆ ಹುಟ್ಟಿದ ಹೆಣ್ಣು ಮಗುವಿನ ಪೋಷಕರಾಗಿದ್ದಾರೆ.
ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಏಪ್ರಿಲ್ನಲ್ಲಿ ಮಗುವಿನ ಆಗಮನವಾಗುತ್ತೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ 12 ವಾರಗಳ ಮೊದಲೇ ಹೆಣ್ಣು ಮಗು ಅಮೆರಿಕದ ಲಾಸ್ ಎಂಜಲೀಸ್ ಆಸ್ಪತ್ರೆಯಲ್ಲಿ ಜನಿಸಿದೆ. ಬಾಡಿಗೆ ತಾಯಿ 27 ವಾರಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಅಂದುಕೊಂಡಿದ್ದಕ್ಕಿಂತ ಮುಂಚಿತವಾಗಿಯೇ ಪ್ರಿಯಾಂಕಾ ತಾಯಿಯಾಗಿದ್ದಾರೆ. 6 ತಿಂಗಳಿಗೆ ಹುಟ್ಟಿದ ಪ್ರೀ-ಮೆಚ್ಯೂರ್ ಬೇಬಿಯಾಗಿರುವುದರಿಂದ ಮಗು, ಬಾಡಿಗೆ ತಾಯಿ ವಾರ ಆಸ್ಪತ್ರೆಯಲ್ಲೇ ವೈದ್ಯರ ನಿಗಾದಲ್ಲಿ ಇರಲಿದ್ದಾರೆ ಎಂದು ಬಾಲಿವುಡ್ ಮಾಧ್ಯಮಗಳು ವರದಿ ಮಾಡಿವೆ.
ಸರೋಗಸಿ ( ಬಾಡಿಗೆ ತಾಯ್ತನ) ಮೂಲಕ ತಾವು ಪೋಷಕರಾಗಿ ಭಡ್ತಿ ಪಡೆದಿರುವುದಾಗಿ ಸ್ವತಃ ಪ್ರಿಯಾಂಕಾ ಚೋಪ್ರಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. “ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಸ್ವಾಗತಿಸುತ್ತೇವೆ ಎಂಬ ವಿಚಾರವನ್ನು ನಿಮ್ಮ ಜೊತೆ ಹಂಚಿಕೊಳ್ಳಲು ನಮಗೆ ಬಹಳ ಖುಷಿಯಾಗುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ನಾವು ಕುಟುಂಬದ ಬಗ್ಗೆ ಗಮನ ಹರಿಸುವ ಕಾರಣದಿಂದ ಖಾಸಗಿತನವನ್ನು ಉಳಿಸುವಂತೆ ಗೌರವಪೂರ್ವಕವಾಗಿ ಮನವಿ ಮಾಡುತ್ತೇನೆ. ಎಲ್ಲರಿಗೂ ಧನ್ಯವಾದಗಳು” ಎಂದು ಪ್ರಿಯಾಂಕಾ ಪೋಸ್ಟ್ ಮಾಡಿದ್ದಾರೆ.
ಅಂತರಾಷ್ಟ್ರೀಯ ಗಾಯಕ ನಿಕ್ ಜೊತೆಗೆ ಪ್ರಿಯಾಂಕ ಚೋಪ್ರ ವರ್ಷಾಂತರಗಳಿಂದ ಡೇಟಿಂಗ್ ನಡೆಸುತ್ತಿದ್ದರು. ಕೊನೆಗೆ ಅವರಿಬ್ಬರೂ 2018ರಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಆಗಿದ್ದರು. ಮದುವೆಯ ನಂತರ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳದ ಪ್ರಿಯಾಂಕಾ ಈಗ ಬಾಡಿಗೆ ತಾಯಿ ಮೂಲಕ ಮಗು ಪಡೆದು ತಮ್ಮ ಕುಟುಂಬದನ್ನು ಬೆಳೆಸಲು ಮುಂದಾಗಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
