fbpx
ಸಮಾಚಾರ

ಸಿಬ್ಬಂದಿ ನೇಮಕಾತಿ ಆಯೋಗದಿಂದ ಭರ್ಜರಿ ನೇಮಕಾತಿ: ಬರೋಬ್ಬರಿ 1920 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು ಮತ್ತು ಸಂಸ್ಥೆಗಳಲ್ಲಿ ಅಗತ್ಯ ಇರುವ 334 ಕೆಟಗರಿಯ ಒಟ್ಟು 1920 ಹುದ್ದೆಗಳನ್ನು ಫೇಸ್‌-10 ಸೆಲೆಕ್ಷನ್ ಪೋಸ್ಟ್‌ ಪರೀಕ್ಷೆ ಮೂಲಕ ಭರ್ತಿ ಮಾಡಲು ಶಾರ್ಟ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-06-2022

ಶೈಕ್ಷಣಿಕ ವಿದ್ಯಾರ್ಹತೆ:
ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಇರುವ ಸೆಲೆಕ್ಷನ್ ಪೋಸ್ಟ್‌ಗಳ 10 ನೇ ಹಂತದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಸಿಬ್ಬಂದಿ ನೇಮಕಾತಿ ಆಯೋಗದ ನಿಯಮಾನುಸಾರ ವಿದ್ಯಾರ್ಹತೆ ಪಡೆದಿರಬೇಕು. 10 ನೆ ತರಗತಿ, ಪಿಯುಸಿ ಮತ್ತು ಪದವಿ ವಿದ್ಯಾರ್ಹತೆ ಮಾಡಿರಬೇಕು.

ಅರ್ಜಿ ಶುಲ್ಕ:
ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಇರುವ ಸೆಲೆಕ್ಷನ್ ಪೋಸ್ಟ್‌ಗಳ 10 ನೇ ಹಂತದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ:
ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಇರುವ ಸೆಲೆಕ್ಷನ್ ಪೋಸ್ಟ್‌ಗಳ 10 ನೇ ಹಂತದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಆನ್‌ಲೈನ್ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿಆಯ್ಕೆಯಾದ ಅಭ್ಯರ್ಥಿಗಳಿಗೆ ಟೈಪಿಂಗ್/ಡೇಟಾ ಎಂಟ್ರಿ/ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆ ಮುಂತಾದ ಕೌಶಲ್ಯ ಪರೀಕ್ಷೆಗಳನ್ನು ನಡೆಸಿ ಆಯಾಯ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‌ಸೈಟ್ : ssc.nic.in

ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top