ಬೆಂಗಳೂರಿನಲ್ಲಿ ಕಳೆದ 3 ವಾರಗಳಿಂದ ಸಂಜೆಯ ಬಳಿಕ ಭಾರೀ ಮಳೆಯಾಗುತ್ತಿದೆ. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ. ಮುಂಗಾರು ಪೂರ್ವ ಮಳೆಯಿಂದ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಬೆಂಗಳೂರು ಮಾತ್ರವಲ್ಲ, ಬೆಂಗಳೂರು ಗ್ರಾಮಾಂತರ ಸೇರಿ ರಾಜ್ಯದ ದಕ್ಷಿಣ ಭಾಗದ ಹಲವು ಪ್ರದೇಶಗಳು ಮತ್ತು ಕರಾವಳಿ ಭಾಗದ ಪ್ರದೇಶಗಳಲ್ಲಿ ಇಂದು ಬುಧವಾರ ಜೋರು ಮಳೆ ಬೀಳುವ ನಿರೀಕ್ಷೆ ಇದೆ. ಇದು ಇವತ್ತು ಮಾತ್ರವಲ್ಲ ಮುಂದಿನ ನಾಲ್ಕೈ ದಿನಗಳವರೆಗೂ ವರುಣನ ಅರ್ಭಟ ನಡೆಯಬಹುದು ಎಂದು ಐಎಂಡಿ ಮಂಗಳವಾರ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಸೋಮವಾರ ರಾತ್ರಿಯೇ ಜಿಲ್ಲೆಯಲ್ಲಿ ಮಳೆ ಜೋರಾಗಿದೆ. ಗುಡುಗು ಸಹಿತ ಮಳೆ ಸುರಿದಿದೆ. ಮಂಗಳವಾರವೂ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಜತೆಗೆ ದಿನವಿಡೀ ಮೋಡ ಕವಿದ ವಾತಾವರಣ ಇತ್ತು. ಆ ಹಿನ್ನೆಲೆಯಲ್ಲಿ ಮೇ 18 ರಂದು ಮಳೆ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
