fbpx
ಸಮಾಚಾರ

ಕೃಷಿ ಇಲಾಖೆ: 300 ಹುದ್ದೆಗಳಿಗೆ ನೇರ ನೇಮಕಾತಿ

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳ ಪೈಕಿ 300 ಹುದ್ದೆಗಳಿಗೆ ಆನ್ಲೈನ್ ಮೂಲಕ ನೇಮಕಾತಿ ನಡೆಸುವ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ತಿಳಿಸಿದ್ದಾರೆ.

ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆದಷ್ಟು ಬೇಗ ನೇಮಕಾತಿ ನಡೆಸಲು ಒಪ್ಪಿಗೆ ನೀಡಬೇಕೆಂದು ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು. ಕೃಷಿ ಸಚಿವರ ಮನವಿಗೆ ಮಿಡಿದು ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು ಸಧ್ಯದಲ್ಲೇ ನೇಮಕಾತಿಯ ಕುರಿತು ಅಧಿಸೂಚನೆಯನ್ನು ಹೊರಡಿಸಲಿದೆ.

300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳ ನಿಯಮದ ಅಡಿಯಲ್ಲಿ 2021ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ನಿಯಮಾನುಸಾರ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಜೋನ್ ಪುಕಾಶ್ ರೋಡ್ರಿಗಸ್ ಅವರು ಕೃಷಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿರುವುದಾಗಿ ಸಚಿವರು ಹೇಳಿದ್ದಾರೆ.

ಕೃಷಿ ಪದವೀಧರರಿಗೆ ಶೇ. 85 ರಷ್ಟು ಹುದ್ದೆಗಳು, ಉಳಿದ ಶೇ. 15 ರಷ್ಟು ಹುದ್ದೆಗಳನ್ನು ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿ.ಟೆಕ್ (ಆಹಾರ ತಂತ್ರಜ್ಞಾನ/ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರಿಗೆ ನೀಡಲು ಚಿಂತಿಸುತ್ತಿದ್ದಾರೆ.

ಈ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡುವುದಾಗಿ ಕೃಷಿ ಇಲಾಖೆ ತಿಳಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top