ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಮೇಲೆ ವಿಪರೀತ ಕುತೂಹಲ ಹುಟ್ಟುಕೊಂಡಿರೋದು ಎಲ್ಲರಿಗೂ ಗೊತ್ತಿರೋ ವಿಚಾರ, ಚಿತ್ರದ ಬಗ್ಗೆ ಸುದೀಪ್ ಅಭಿಮಾನಿಗಳು ಸೇರಿದಂತೆ ಸಿನಿರಸಿಕರೆಲ್ಲರಲ್ಲೂ ತಲೆಕೆಡಿಸಿಕೊಂಡು ಕೂತಿದ್ದಾರೆ. ಅದ್ಧೂರಿ ಮೇಕಿಂಗ್, ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವಂತಹ ಪೋಸ್ಟರ್ ,ಸ್ಟಿಲ್ಲುಗಳ ಮೂಲಕವೇ ಭಾರಿ ಸಂಚಲನ ಸೃಷ್ಟಿಸಿರುವ ಈ ಚಿತ್ರ ಎಬ್ಬಿಸಿರೋ ಅಲೆ ಕಂಡು ಬಹುತೇಕರು ಅಚ್ಚರಿಗೊಂಡಿದ್ದಾರೆ. ಚಿತ್ರದ ಮೇಲಿನ ನಿರೀಕ್ಷೆ ಕೋಡಿಯೊಡೆಯುತ್ತಿದೆ.
ವಿಕ್ರಾಂತ್ ರೋಣ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಸದ್ಯ, ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಈ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಪಾತ್ರದ ಹೆಸರು ಗಡಂಗ್ ರಕ್ಕಮ್ಮ. ಈ ಹೆಸರನ್ನೇ ಬಳಸಿಕೊಂಡು‘ರಾ ರಾ ರಕ್ಕಮ್ಮ..’ ಎಂಬ ಸ್ಪೆಷಲ್ ಸಾಂಗ್ ಮಾಡಲಾಗಿದೆ. ಈ ಹಾಡಿನ ಲಿರಿಕಲ್ ವಿಡಿಯೋ ಯಾವಾಗ ರಿಲೀಸ್ ಆಗಲಿದೆ ಎಂಬ ಬಗ್ಗೆ ಸುದೀಪ್ ತಿಳಿಸಿದ್ದಾರೆ.
2 Days To Go | Welcome Gadang Rakkamma – The Queen Of Good Times #RaRaRakkamma lyric video on
Kannada – 23 May – 3:05 PM
Hindi – 24 May – 1:05 PM
Telugu – 25 May – 1:05 PM
Tamil – 26 May – 1:05 PM
Malayalam – 27 May – 1:05 PM #VRonJuly28 @Asli_Jacqueline @vikrantrona pic.twitter.com/LH4OoCKdXc— Kichcha Sudeepa (@KicchaSudeep) May 21, 2022
ಒಂದೊಂದು ಭಾಷೆಯಲ್ಲಿ ಒಂದೊಂದು ದಿನ ರಿಲೀಸ್
ಸಾಮಾನ್ಯವಾಗಿ ಎಲ್ಲಾ ಭಾಷೆಗಳಲ್ಲಿ ಸಾಂಗ್ ಏಕ ಕಾಲದಲ್ಲಿ ರಿಲೀಸ್ ಮಾಡಲಾಗುತ್ತದೆ. ಆದರೆ, ‘ವಿಕ್ರಾಂತ್ ರೋಣ’ ಬೇರೆ ತಂತ್ರ ಬಳಸಿದೆ. ‘ರಾ ರಾ ರಕ್ಕಮ್ಮ..’ ಲಿರಿಕಲ್ ಸಾಂಗ್ ಬಗ್ಗೆ ಸುದೀಪ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದು, ಒಂದೊಂದು ಭಾಷೆಯಲ್ಲೂ ಒಂದೊಂದು ದಿನಾಂಕದಂದು ಈ ಹಾಡು ಬಿಡುಗಡೆಯಾಗುತ್ತಿದ್ದು, ಕನ್ನಡದಲ್ಲಿ ಮೇ 23 ರಂದು ಮಧ್ಯಾಹ್ನ 3.5ಕ್ಕೆ ರಿಲೀಸ್ ಆಗಲಿದೆ. ಇನ್ನು ಹಿಂದಿಯಲ್ಲಿ ಮೇ 24ಕ್ಕೆ ಮಧ್ಯಾಹ್ನ 01.05 ಕ್ಕೆ ಬಿಡುಗಡೆಯಾಗುತ್ತಿದ್ದು, ತೆಲುಗಿನಲ್ಲಿ ಮೇ 24 ರಂದು ಮಧ್ಯಾಹ್ನ 01.05ಕ್ಕೆ ಈ ಹಾಡು ಬಿಡುಗಡೆಯಾಗಲಿದೆ ಎಂದು ಕಿಚ್ಚ ಮಾಹಿತಿ ನೀಡಿದ್ದಾರೆ. ತಮಿಳಿನಲ್ಲಿ ಮೇ 26ರಂದು ಮಧ್ಯಾಹ್ನ 01.05ಕ್ಕೆ ಹಾಗೂ ಮಲಯಾಳಂನಲ್ಲಿ ಮೇ 27 ರಂದು 01.05ಕ್ಕೆ ಈ ಲಿರಿಕಲ್ ಹಾಡು ರಿಲೀಸ್ ಆಗುತ್ತಿದೆ
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
