ಈ ಹಿಂದೆ ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬಂದಾಗ “ಮೈಸೂರು ಪ್ಯಾರಿಸ್ ಮಾಡುತ್ತೇವೇ” ಎಂದು ಹೇಳಿರುವ ಹೇಳಿಕೆ ಈಗ ಮತ್ತೆ ಚರ್ಚೆಗೆ ಗ್ರಾಸವಾಗುತ್ತಿದೆ.. ಈ ಬಗ್ಗೆ ಮೈಸೂರು ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು ಮೋದಿಯವರು “ಮೈಸೂರನ್ನ ಪ್ಯಾರಿಸ್ ಮಾಡುತ್ತೇವೆಂದು ಮೋದಿ ಹೇಳಿಲ್ಲ, ಅವರ ಹೇಳಿಕೆಯನ್ನು ತಿರುಚಲಾಗಿದೆ” ಎಂದು ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಬಾರಿ ನರೇಂದ್ರ ಮೋದಿ ಅವರು ಇಲ್ಲಿಗೆ ಬಂದಿದ್ದಾಗ ಮೈಸೂರನ್ನು ಪ್ಯಾರೀಸ್ ಮಾಡುವೆ ಎಂದಿರಲಿಲ್ಲ. ಆಗ ವಿಶ್ವದ ಅತಿ ಹೆಚ್ಚು ಪ್ರವಾಸಿಗರನ್ನು ಪ್ಯಾರೀಸ್ ಸೆಳೆಯುತ್ತಿತ್ತು. ಅದೇ ತರಹ ಮೈಸೂರಿಗೆ ಪ್ರವಾಸಿಗಳನ್ನು ಸೆಳೆಯುವ ಶಕ್ತಿ ಇದೆ ಎಂದಿದ್ದರು. ಅದಕ್ಕಾಗಿ ವಿಮಾನಯಾನ ಸೌಲಭ್ಯ ಸೇರಿದಂತೆ ಹಲವು ಕೊಡುಗೆಗಳನ್ನು ಮೈಸೂರಿಗೆ ನೀಡಿದ್ದಾರೆ’ ಎಂದು ಹೇಳಿದರು.
ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಈ ಬಾರಿ ದೇಶದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಬಗ್ಗೆ ಪ್ರಧಾನಿ ಕಾರ್ಯಾಲಯ ದೃಢಪಡಿಸಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ಗೆ ಪತ್ರ ಬರೆದಿದೆ. ಇನ್ನು ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದರು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
