ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮೇ 16 ರಂದು ಮಂಡ್ಯದ ಹಲವು ಕಾಲೇಜುಗಳಲ್ಲಿ ಸಚಿವ ಅಶ್ವತ್ಥ್ ನಾರಾಯಣ ಪಕ್ಷದ ಮುಖಂಡರ ಜೊತೆ ಪ್ರಚಾರ ಸಭೆ ನಡೆಸಿದ್ದರು. ಈ ಮೂಲಕ ಸಚಿವರಿಂದಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ದೂರು ನೀಡಿದ್ದರು. ಈ ಕಾರಣ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಮತ್ತು ಬಿಜೆಪಿ ಅಭ್ಯರ್ಥಿ ಎಂ.ವಿ.ರವಿಶಂಕರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
2ನೇ ACJ ಮತ್ತು JMFC ನ್ಯಾಯಾಲಯದ ಆದೇಶದಂತೆ ಮಂಡ್ಯದ (Mandya) ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. IPC ಸೆಕ್ಷನ್ 1860 (U/s-171C, 171F) ಮತ್ತು REPRESENTATION OF PEOPLE ACT(ಪ್ರಜಾಪ್ರತಿನಿಧಿ ಕಾಯ್ದೆ) 1950,1951,1989 (U/s-123) ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣದಲ್ಲಿ ಸಚಿವ ಅಶ್ವಥ್ ನಾರಾಯಣ A1 ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ A2 ಆರೋಪಿಗಳಾಗಿದ್ದಾರೆ.
ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುವಂತೆ ನ್ಯಾಯಾಲಯ ಪೂರ್ವ ಠಾಣೆ ಪೊಲೀಸರಿಗೆ ಸೂಚಿಸಿತ್ತು. ‘ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಚಿವ ಅಶ್ವತ್ಥನಾರಾಯಣ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು ನೀತಿ ಸಂಹಿತೆ ಉಲ್ಲಂಘಿಸಿದ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ತಿಳಿಸಿದರು. PSI ಕೆ.ಎನ್.ಕೇಶವಮೂರ್ತಿ ಕೋರ್ಟ್ ಆದೇಶದಂತೆ FIR ದಾಖಲಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
