fbpx
ಸಮಾಚಾರ

ಗಾಯಕ ಕೆಕೆ ಸಾವಿನಲ್ಲಿ ಮೂಡಿದೆ ಅನುಮಾನ; ಮುಖ, ತಲೆಯಲ್ಲಿ ಗಾಯದ ಗುರುತು? ಪ್ರಕರಣ​ ದಾಖಲು

ಖ್ಯಾತ ಹಿನ್ನೆಲೆ ಗಾಯಕ ಕೃಷ್ಣಕುಮಾರ್ ಕುನ್ನತ್ (ಕೆಕೆ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಜನಪ್ರಿಯ ಗಾಯಕ ಕೆಕೆ ಮಂಗಳವಾರ ತಮ್ಮ 53 ನೇ ವಯಸ್ಸಿನಲ್ಲಿ ವೇದಿಕೆ ಕಾರ್ಯಕ್ರಮವೊಂದರಲ್ಲಿ ಹಾಡುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದರು. ಇದೀಗ ಇವರ ಸಾವಿನ ಸುತ್ತಾ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ.

ಕೇಕೆ ಅವರ ತಲೆ ಮತ್ತು ಮುಖದಲ್ಲಿ ಗಾಯದ ಗುರುತುಗಳು ಕಾಣುತ್ತಿದ್ದವು. ಈಗಾಗಿ ಪೊಲೀಸರು ಇದನ್ನು ಅಸಹಜ ಸಾವೆಂದು ಪರಿಗಣಿಸಿ ಕೇಸ್ ಧಾಖಲಿಸಿದ್ದಾರೆ. ಇದಲ್ಲದೆ ಇವರು ಕಾರ್ಯಕ್ರಮದ ವೇಳೆ ಹಲವು ಬಾರಿ ವೇದಿಕೆಯ ಹಿಂಭಾಗಕ್ಕೆ ತೆರಳಿದ್ದರು ಎಂಬ ಮಾಹಿತಿ ಕೂಡ ಕೇಳಿಬರುತ್ತಿದೆ.

ಹೀಗಾಗಿ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ನಿಜವಾಗಿಯೂ ಕೇಕೆ ಅವರಿಗೆ ಏನಾಯಿತು ಎಂದು ಯೋಚಿಸುತ್ತಿದ್ದಾರೆ. ಹೀಗಾಗಿ ಹೋಟೆಲ್ ನಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ವಶಕ್ಕೆ ಪಡೆದು ಅದನ್ನು ಪರೀಕ್ಷಿಸುತ್ತಿದ್ದಾರೆ. ಇದಲ್ಲದೆ ಹೋಟೆಲ್ ಸಿಬ್ಬಂದಿ ಮತ್ತು ಕಾರ್ಯಕ್ರಮದ ಆಯೋಜಕರನ್ನು ಸಹ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಹೀಗಾಗಿ ಮರಣೋತ್ತರ ಪರೀಕ್ಷೆ ಫಲಿತಾಂಶ ಹೊರ ಬಂದ ನಂತರವೇ ಕೇಕೆ ಅವರ ಸಾವಿಗೆ ಅಸಲಿ ಕಾರಣ ಏನೆಂಬುದು ತಿಳಿಯಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top