ಬಾಂಗ್ಲಾದೇಶಿ ನುಸುಳಿಕೋರರಿಗೆ ಅಕ್ರಮ ಆಧಾರ್ ಕಾರ್ಡ್ ಹಾಗು ಇನ್ನಿತರ ಧಾಖಲೆಗಳನ್ನು ಒದಗಿಸುತ್ತಿದ್ದ ಜಾಲವೊಂದನ್ನು ಬೆಂಗಳೂರಿನ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ.
ಇತ್ತೀಚಿಗೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ಸರಹದ್ದಿನ ಪ್ರದೇಶವೊಂದರಲ್ಲಿ ಏಟಿಎಂ ಜೊತೆ 18 ಲಕ್ಷ ಲೂಟಿ ಪ್ರಕರಣ ನಡೆದ ಬೆನ್ನಲ್ಲೇ ಅಕ್ರಮವಾಗಿ ದೇಶ ನುಸುಳಿದ್ದ ಬಾಂಗ್ಲಾದೇಶದ ನಾಗರೀಕನೊಬ್ಬನನ್ನು ಬಂಧಿಸಲಾಗಿತ್ತು. ವಿಚಾರಣೆ ಸಂಧರ್ಭದಲ್ಲಿ ನಕಲಿ ಧಾಖಲೆಗಳನ್ನು ಒದಗಿಸುವ ಜಾಲದ ಬಗ್ಗೆ ಸುಳಿವು ಸಿಕ್ಕಿದ್ದು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ತನಿಖೆಯ ಬಳಿಕ ತಿಳಿದು ಬಂದ ಮಾಹಿತಿ ಏನೆಂದರೆ ನಕಲಿ ಧಾಖಲೆ ಪಡೆದು ಬೆಂಗಳೂರಿನಲ್ಲಿ ವಾಣಿಜ್ಯ ವ್ಯವಹಾರ ನಡೆಸುತ್ತಿದ್ದ ಅಕ್ರಮ ವಲಸಿಗಾರ ಸುಮಾರು ಸುಮಾರು 4 ಕೋತಿ ರೂಪಾಯಿಗಳನ್ನು ಬಾಂಗ್ಲಾದೇಶಿ ಕರೆನ್ಸಿ ಆಗಿ ಪರಿವರ್ತಿಸಿ ಆ ದೇಶಕ್ಕೆ ಈಗಾಗಲೇ ವರ್ಗಾವಣೆ ಗೊಳಿಸಿದ್ದಾನೆ ಎಂದು ತಿಳಿಸಲಾಗಿದೆ.
ಪೋಲೀಸರ ಸಾಹಸದ ಕುರಿತು ಮಾತನಾಡಿದ ಗೃಹ ಸಚಿವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರನ್ನು ಅಭಿನಂದಿಸಿದ್ದಾರೆ. ಅಕ್ರಮ ವಲಸಿಗರು ಮತ್ತು ಅವರಿಗೆ ಆಶ್ರಯ ಮತ್ತು ಇನ್ನಿತರ ಸಹಕಾರ ಹಾಗು ಸಹಾಯವನ್ನು ಒದಗಿಸುತ್ತಿರುವವರ ವಿರುದ್ಧ ತೀರಾ ನಿಗಾ ಒದಗಿಸಬೇಕೆಂದು ಮತ್ತು ಅಕ್ರಮ ಚಟುವಟಿಕೆಗಳಿಗೆ ನಿಯಂತ್ರಣ ಹೇರಬೇಕೆಂದು ಹೇಳಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
