ಕನ್ನಡ ಚಿತ್ರರಂಗದ ಅತಿ ನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಚಿತ್ರದ ನಿರ್ಮಾಪಕ ಜ್ಯಾಕ್ ಮಂಜು ಮೊನ್ನೆಯಷ್ಟೇ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಹೊರಬಿದ್ದಿತ್ತು. ಬನ್ನೇರುಘಟ್ಟದ ರಸ್ತೆಯ ಅಪೋಲೋ ಆಸ್ಪತ್ರೆಗೆ ಜೂನ್ 10ರಂದೇ ಅವರನ್ನು ದಾಖಲಿಸಲಾಗಿತ್ತು. ಕಳೆದ ನಾಲ್ಕು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಗಂಭೀರವಾದ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗಿತ್ತು. ಜಾಕ್ ಮಂಜು ಅವರ ಒಂದು ಫೋಟೋ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಕಿಚ್ಚ ಸುದೀಪ್ ಗೆಳೆಯ ಜಾಕ್ ಮಂಜು ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.
My dear brother and friend @JackManjunath is fine and getting discharged today. He was admitted on precautionary grounds and nothing serious. Few leaked pics taken by staff while he was sleeping is doing rounds making it look serious.
Thanks to all fo ua wshs and prayers.🙏🏼— Kichcha Sudeepa (@KicchaSudeep) June 14, 2022
ಸಾಮಾಜಿಕ ಜಾಲತಾಣದಲ್ಲಿ ಜಾಕ್ ಮಂಜು ಆರೋಗ್ಯದ ಅಪ್ ಡೇಟ್ ನೀಡಿರುವ ಸುದೀಪ್, ‘ನನ್ನ ಆತ್ಮೀಯ ಗೆಳೆಯ ಮತ್ತು ಸಹೋದರ ಜಾಕ್ ಮಂಜು ಆರೋಗ್ಯವಾಗಿದ್ದಾರೆ. ಇಂದು ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗುತ್ತಿದ್ದಾರೆ. ಮುನ್ನೆಚ್ಚರಿಕೆ ಆಧಾರದ ಮೇಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಸಮಸ್ಯೆ ಏನು ಇಲ್ಲ. ಜಾಕ್ ಮಂಜು ಆಸ್ಪತ್ರೆ ಬೆಡ್ ಮೇಲೆ ಮಲಗಿರುವ ಕೆಲವು ಫೋಟೋಗಳು ಗಂಭೀರ ಆಗಿದೆ ಎನ್ನುವ ಹಾಗಿದೆ. ನಿಮ್ಮೆಲ್ಲರ ಪ್ರಾರ್ಥನೆಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ. ಕಿಚ್ಚನ ಮಾತು ಕೇಳಿ ಅಭಿಮಾನಿಗಳು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ.
ಮಂಜು ಅವರ ಆರೋಗ್ಯ ಚೇತರಿಕೆಗಾಗಿ ಕಿಚ್ಚನ ಅಸಂಖ್ಯಾತ ಅಭಿಮಾನಿಗಳು ಹಾರೈಸಿದ್ದು, ಮಂಜು ಕೂಡ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ. ಸಿನಿಮಾ ಪ್ರಚಾರಕ್ಕಾಗಿ ಅವರು ಸಾಕಷ್ಟು ಓಡಾಟ ನಡೆಸಿದ್ದರು. ಈ ಒತ್ತಡದಿಂದಾಗಿ ಇಂತಹ ಸಮಸ್ಯೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರಂತೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
