ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಪದ್ಯದ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರವನ್ನು ವಿಸ್ತರಿಸಲಾಗಿದೆ. ಈ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಅಂತಿಮ ಟಿ-20 ಪಂದ್ಯ ನಡೆಯಲಿದ್ದು, ಮಧ್ಯರಾತ್ರಿ 1-30 ರತನಕ ಮೆಟ್ರೊ ಸೇವೆಯನ್ನು ವಿಸ್ತರಿಸಲಾಗಿದೆ. ಇದರ ಜತೆಗೆ ಟಿಕೆಟ್ ಕೌಂಟರ್‌ನಲ್ಲಿ ಸಂಚಾರ ದಟ್ಟನೆಯನ್ನು ತಪ್ಪಿಸುವ ಸಲುವಾಗಿ ಪೇಪರ್ ಟಿಕೆಟ್ ವಿತರಿಸಲು ತೀರ್ಮಾನಿಸಲಾಗಿದೆ.
ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನೀಗಿಸಲು ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಪಂದ್ಯ ನಡೆಯುವ ಜೂನ್ 19 ಮಧ್ಯಾಹ್ನ 3 ಗಂಟೆಯಿಂದ ಮೆಟ್ರೋ ಪ್ರಯಾಣಿಕರಿಗೆ ಪೇಪರ್ ಟಿಕೆಟ್ ನೀಡಲಾಗುತ್ತದೆ. ಒಂದು ಟಿಕೆಟ್ ಬೆಲೆಯನ್ನು 50 ರೂಪಾಯಿ ನಿಗದಿ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಎಂಆರ್‌ಸಿಎಲ್ ಪೇಪರ್ ಟಿಕೆಟ್ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಕೂಡಾ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯುವಾಗ ಪೇಪರ್ ಟಿಕೆಟ್ ವಿತರಿಸುವ ಮೂಲಕ ಟಿಕೆಟ್ ಕೌಂಟರ್‌ನಲ್ಲಿ ಹೆಚ್ಚು ಜನ ಗುಂಪುಗೂಡದಂತೆ ಮಾಡುವಲ್ಲಿ ಯಶಸ್ವಿಯಾಗಿತ್ತು.
ಕೇವಲ ಮೆಟ್ರೋ ಮಾತ್ರಲ್ಲದೆ BMTC ಬಸ್ಗಳು ಮಧ್ಯರಾತ್ರಿಯೂ ದೊರೆಯಲಿವೆ. ಬಿಎಂಟಿಸಿ ಬಸ್ಗಳು ಮಧ್ಯಾಹ್ನ 3 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಿಂದ ಕೆಂಗೇರಿ, ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ, ಮಾಗಡಿ ರೋಡ್, ಯಲಹಂಕ, ನೆಲಮಂಗಲ, ನಾಗವಾರ, ಬಾಣಸವಾಡಿ, ಬಾಗಲೂರು, ಹೊಸಕೋಟೆಗೆ ಮ್ಯಾಚ್ ಮುಗಿದ ಬಳಿಕವೂ ಸಂಚರಿಸಲಿವೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
