ದಕ್ಷಿಣ ಭಾರತ ಚಿತ್ರರಂಗದ ಪ್ರತಿಭಾನ್ವಿತ ನಟಿ ಸಾಯಿ ಪಲ್ಲವಿ ಅವರ ಹೇಳಿಕೆಯೊಂದು ಸಂಚಲನ ಸೃಷ್ಟಿಸಿದ್ದು ಪರ ವಿರೋಧ ಚರ್ಚೆಗಳು ಶುರುವಾಗಿವೆ. ಧರ್ಮ ಮತ್ತು ದೇವರ ಹೆಸರಿನಲ್ಲಿ ಜನರ ಮೇಲೆ ಹಲ್ಲೆ ಮಾಡುವುದು ತಪ್ಪು ಎಂದು ಹೇಳಿರುವ ಸಾಯಿ ಪಲ್ಲವಿ ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮತ್ತು ಮುಸ್ಲಿಂ ಡ್ರೈವರ್ ಮೇಲಿನ ಹಲ್ಲೆಯ ಘಟನೆಯನ್ನು ಪರಸ್ಪರ ಹೋಲಿಸಿ ಮಾತನಾಡಿದ್ದಾರೆ. ವಿಚಿತ್ರ ಎಂಬಂತೆ ಇದೇ ವಿಚಾರವಾಗಿ ಸಾಯಿ ಪಲ್ಲವಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ಸಾಯಿ ಪಲ್ಲವಿ ವಿರುದ್ಧ ಹೈದರಾಬಾದ್ನಲ್ಲಿ ಪ್ರಕರಣ ದಾಖಲಾಗಿದ್ದು ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಹೈದರಾಬಾದ್ನ ಭಜರಂಗ ದಳದ ಪದಾಧಿಕಾರಿಗಳು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂದರ್ಶನದ ವಿಡಿಯೊ ನೋಡಿದ ಬಳಿಕ ಕಾನೂನು ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
This remark by Sai Pallavi was too controversial for many north Indians. pic.twitter.com/IlEN2bwhcF
— Brut India (@BrutIndia) June 16, 2022
ಸಾಯಿ ಪಲ್ಲವಿ ಹೇಳಿದ್ದೇನು?
ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಕಾಶ್ಮೀರಿ ಫೈಲ್ಸ್ ನೋಡಿದಾಗ ಅದರಲ್ಲಿ ಕಾಶ್ಮೀರಿ ಪಂಡಿತರನ್ನು ಅಮಾನುಶವಾಗಿ ಸಾಯಿಸಲಾಯಿತು ಎಂದಿದೆ. ಆದರೆ ಇತ್ತೀಚೆಗೆ ಒಂದು ಘಟನೆ ನೋಡಿದಾಗ ಓರ್ವ ಮುಸ್ಲಿಂ ಡ್ರೈವರ್ ಹಸುಗಳನ್ನ ಸಾಗಿಸುತ್ತಿದ್ದಾಗ ಆತನ ಮೇಲೆ ಗುಂಪೊಂದು ಎಗರಿಬಿದ್ದು ಹೊಡೆದು ಬಡಿದು ಜೈ ಶ್ರೀರಾಮ್ ಎಂದು ಹೇಳಿಸಲಾಯಿತು. ಈ ಎರಡು ಘಟನೆ ನೋಡಿದಾಗ ಯಾವ ನಿರ್ಧಾರಕ್ಕೆ ಬರಲಾಗುತ್ತದೆ ಹೇಳಿ? ಎಂದಿದ್ದಾರೆ.
In Kashmir files They showed how Kashmir pandits were killed but during lockdown we saw how Muslims were lynched and people who killed them shouting jai shri ram . Sai pallavi pic.twitter.com/UVuo0kh1hC
— Muzaffar (@El_Mozaffer) June 14, 2022
ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ನಾನು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ. ಇವರ ಮಾತಿಗೆ ಹಲವರು ಮೆಚ್ಚಿಕೊಂಡರೆ, ಇನ್ನೂ ಕೆಲವು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
