ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹೆಸರನ್ನು ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆಯೆಂದು ಮರುನಾಮಕರಣ ಮಾಡಲಾಗಿದೆ. ಪ್ರಾಥಮಿಕ, PU ಶಿಕ್ಷಣ ಇಲಾಖೆ ಒಟ್ಟುಗೂಡಿಸಿ ಮರುನಾಮಕರಣ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ‘ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ದೇಶದ ಬಹುತೇಕ ಎಲ್ಲ ರಾಜ್ಯಗಳಲ್ಲಿ 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೆ ಒಳಪಡುತ್ತದೆ. ‘ರಾಷ್ಟ್ರೀಯ ಶಿಕ್ಷಣ ನೀತಿ-2020ರಲ್ಲಿಯೂ ಈ ಅಂಶವನ್ನು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಇಲಾಖೆಗಳನ್ನು ಒಟ್ಟುಗೂಡಿಸಿ ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರುನಾಮಕಾರಣ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ.
ರಾಜ್ಯದ 'ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ'ಯನ್ನು 'ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ' ಎಂದು ಮರು ನಾಮಕರಣ ಮಾಡಲಾಗಿದೆ.
12ನೇ ತರಗತಿ ವರೆಗಿನ ಶಿಕ್ಷಣವು ಶಾಲಾ ಶಿಕ್ಷಣ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಅಂಶವನ್ನು
'ರಾಷ್ಟ್ರೀಯ ಶಿಕ್ಷಣ ನೀತಿ-2020'ರಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲಾಗಿದೆ.@BSBommai pic.twitter.com/wHfxa98npk
— B.C Nagesh (@BCNagesh_bjp) June 24, 2022
ಈಗಾಗಲೇ ಕೇಂದ್ರ ಸರ್ಕಾರ ಹಾಗೂ ಹೆಚ್ಚಿನ ರಾಜ್ಯಗಳಲ್ಲಿ “ಶಾಲಾ ಶಿಕ್ಷಣ ಇಲಾಖೆ” ಎಂಬ ಪದನಾಮ ರೂಡಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಮಾದರಿಯನ್ನು ಅಳವಡಿಸಲು ತಿರ್ಮಾನಿಸಲಾಗಿದ್ದು, ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿದ್ದಾರೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಸದರಿ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಭಿಪ್ರಾಯವನ್ನು ಪಡೆಯಲಾಗಿದೆ. ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ನಂತರ ಈ ಆದೇಶವನ್ನು ಹೊರಡಿಸಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
