fbpx
ಸಮಾಚಾರ

ರೋಹಿತ್ ಚಕ್ರತೀರ್ಥಗೆ ನಾಗರಿಕ ಸನ್ಮಾನ ರದ್ದು

ಬಲಪಂಥೀಯ ಲೇಖಕ ರೋಹಿತ್ ಚಕ್ರತೀರ್ಥಗೆ ಸನ್ಮಾನಿಸಲು ಆಯೋಜನೆಗೊಂಡಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ರುದ್ದುಗೊಳಿಸಲಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಇಂದು (ಜೂನ್ 25) ಮಂಗಳೂರು ನಗರದ ಕೆನರಾ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜನೆಗೊಂಡಿತ್ತು.

ಪ್ರತಿಭಟನೆ ನಡೆಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರೋ ಕಾರಣದಿಂದ ಕಾರ್ಯಕ್ರಮ ರದ್ದು ‌ಮಾಡಿರುವುದಾಗಿ ಆಯೋಜಕರು ಮಾಹಿತಿ ನೀಡಿದ್ದಾರೆ. ಹೌದು, ವಿವಿಧ ಸಂಘಟನೆಗಳಿಂದ ಚಕ್ರತೀರ್ಥ ಕಾರ್ಯಕ್ರಮಕ್ಕೆ ಮುತ್ತಿಗೆ ನಿರ್ಧಾರ ಹಿನ್ನೆಲೆ ಕಾರ್ಯಕ್ರಮ ರದ್ದು ಮಾಡಲಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದು ಮಾಡಿರುವುದಾಗಿ ಆಯೋಜಕರು ತಿಳಿಸಿದ್ದಾರೆ.

ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಹೆಸರಿನಲ್ಲಿ ಕನ್ನಡಪರ ಮತ್ತು ದಲಿತಪರ ಸಂಘಟನೆಗಳಿಂದ ಶನಿವಾರ ಪ್ರತಿಭಟನೆಗೆ ಕರೆ ಕೊಡಲಾಗಿತ್ತು. ಸಂಜೆ 4 :30 ಕ್ಕೆ ಸಮಾನ ಮನಸ್ಕ ಸಂಘಟನೆಗಳು, ನಾಗರಿಕರು ಒಟ್ಟು ಸೇರಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಮೆರವಣಿಗೆ ಮೂಲಕ ತೆರಳಿ ಡೊಂಗರಕೇರಿ ಕೆನರಾ ಹೈಸ್ಕೂಲ್ ನ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ‌ನಿರ್ಧರಿಸಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top