ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಮೇಲೆ ವಿಪರೀತ ಕುತೂಹಲ ಹುಟ್ಟುಕೊಂಡಿರೋದು ಎಲ್ಲರಿಗೂ ಗೊತ್ತಿರೋ ವಿಚಾರ, ಚಿತ್ರದ ಬಗ್ಗೆ ಸುದೀಪ್ ಅಭಿಮಾನಿಗಳು ಸೇರಿದಂತೆ ಸಿನಿರಸಿಕರೆಲ್ಲರಲ್ಲೂ ತಲೆಕೆಡಿಸಿಕೊಂಡು ಕೂತಿದ್ದಾರೆ. ಅದ್ಧೂರಿ ಮೇಕಿಂಗ್, ಪೋಸ್ಟರ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವಂತಹ ಸ್ಟಿಲ್ಲುಗಳ ಮೂಲಕವೇ ಭಾರಿ ಸಂಚಲನ ಸೃಷ್ಟಿಸಿರುವ ಈ ಚಿತ್ರ ಎಬ್ಬಿಸಿರೋ ಅಲೆ ಕಂಡು ಬಹುತೇಕರು ಅಚ್ಚರಿಗೊಂಡಿದ್ದಾರೆ. ಚಿತ್ರದ ಮೇಲಿನ ನಿರೀಕ್ಷೆ ಕೋಡಿಯೊಡೆಯುತ್ತಿದೆ.
ಮೊನ್ನೆಯಷ್ಟೇ ಚಿತ್ರ ಅಫೀಶಿಯಲ್ ಟ್ರೇಲರ್ ರಿಲೀಸ್ ಆಗಿದ್ದು ಎಲ್ಲೆಡೆ ಅದ್ಭುತ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಟ್ರೈಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನಯು ದುಪ್ಪಟ್ಟು ಮಾಡಿದೆ. ಕಥೆಯಲ್ಲಿನ ಟ್ವಿಸ್ಟ್ ಗಳು ಸಿನಿ ಪ್ರೇಮಿಗಳಲ್ಲಿ ಸಿನಿಮಾ ನೋಡಲು ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ. ಬಾಲಿವುಡ್, ಟಾಲಿವುಡ್ ಸೇರಿದಂತೆ ಭಾರತ ಸಿನಿರಂಗದ ಖ್ಯಾತ ನಾಮರು ವಿಕ್ರಾಂತ್ ರೋಣನಿಗೆ ಸಾಥ್ ನೀಡಿದ್ದಾರೆ. ಇದೀಗ ಬಾಲಿವುಡ್ನ ಬಿಗ್ ಬಿ ಅಮಿತಾಬ್ ಬಚ್ಚನ್ ಕೂಡ ವಿಕ್ರಾಂತ್ ರೋಣನಿಗೆ ಕೈಜೋಡಿಸಿದ್ದಾರೆ.
T 4331 – Kannada star SUDEEP .. a pan india film VIKRANT RONA in 3 D .. releasing in 5 languages on July 28 th https://t.co/fWdBFkmjT7
— Amitabh Bachchan (@SrBachchan) June 27, 2022
ಟ್ವೀಟ್ ಮಾಡಿದೆ ಅಮಿತಾಭ್ ಬಚ್ಚನ್
‘ವಿಕ್ರಾಂತ್ ರೋಣ’ ಸಿನಿಮಾದ ಟ್ರೇಲರ್ ಹಂಚಿಕೊಂಡಿರುವ ಅಮಿತಾಭ್ ಬಚ್ಚನ್, ‘ಕನ್ನಡ ಸ್ಟಾರ್ ಸುದೀಪ್ ಅವರ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ 3ಡಿ ರೂಪದಲ್ಲಿ, ಐದು ಭಾಷೆಗಳಲ್ಲಿ ಜುಲೈ 28ರಂದು ರಿಲೀಸ್ ಆಗುತ್ತಿದೆ..’ ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್ ಅನ್ನು ಸಾವಿರಾರು ಜನ ಲೈಕ್ ಮಾಡುವುದರ ಜೊತೆಗೆ ರೀ-ಟ್ವೀಟ್ ಮಾಡಿದ್ದಾರೆ. ಜೊತೆಗೆ ಸುದೀಪ್ ಅಭಿಮಾನಿಗಳು ಅಮಿತಾಭ್ ಬಚ್ಚನ್ಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಅಂದಹಾಗೆ ಅನುಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಜುಲೈ 28 ರಂದು ವಿಶ್ವಾದ್ಯಂತ 3D ಅವತರಣಿಕೆಯಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್, ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಜಾಕ್ ಮಂಜುನಾಥ್ ಅವರು ಶಾಲಿನಿ ಆರ್ಟ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದು, ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಣ ಮಾಡುತ್ತಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
