fbpx
ಸಮಾಚಾರ

ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗೆ ಇಲಾಖೆ ನೇಮಕಾತಿ: 2000 ಅಗ್ನಿಶಾಮಕ ಹುದ್ದೆಗಳ ಭರ್ತಿ

ರಾಜ್ಯದಲ್ಲಿ ಪ್ರಸಕ್ತ ಈ ವರ್ಷ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗೆ ಇಲಾಖೆಗೆ 2 ಸಾವಿರ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬುಧವಾರ ಜಯನಗರದಲ್ಲಿ ಅಗ್ನಿಶಾಮಕ ದಳ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ” ಈ ವರ್ಷ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಶಾಮಕ ಠಾಣೆ ನೂತನ ಕಟ್ಟಡವನ್ನು ಇಂದು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ, ರಾಜ್ಯ ಸರಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ, ಎಂದರು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ ಅಗ್ನಿಶಾಮಕ, ಚಾಲಕ ಇತರೆ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಕನಿಷ್ಠ ಎಸ್‌ಎಸ್‌ಎಲ್‌ಸಿ ಇಂದ ಪಿಯುಸಿ, ಡಿಗ್ರಿ ಪಾಸಾದವರಿಗೆ ಈ ಇಲಾಖೆಯ ಹುದ್ದೆಗಳು ಲಭ್ಯ. ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಸಹಿಷ್ಣುತಾ ಪರೀಕ್ಷೆಗಳನ್ನು ನಡೆಸುವ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಗೃಹ ಸಚಿವರು ನೀಡಿದ ಮಾಹಿತಿಯಂತೆ ಈ ವರ್ಷವೇ ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆ ಇದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಗ್ರಿ ಪಾಸಾದ ಅಭ್ಯರ್ಥಿಗಳು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಗೆ ಇಂದಿನಿಂದಲೇ ತಯಾರಿ ಆರಂಭಿಸಿ. ಹಾಗೂ ಇಟಿ, ಪಿಎಸ್‌ಟಿ ಪರೀಕ್ಷೆಗೆ ತಯಾರಿ ನಡೆಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top