fbpx
ಸಮಾಚಾರ

ಜೀವ ಬೆದರಿಕೆ ಕೇಸ್: ಪೊಲೀಸರ ಮುಂದೆ ಅನುಷ್ಕಾ ಶೆಟ್ಟಿ ಸೋಹದರನ ಹೇಳಿಕೆ

ಚಿತ್ರ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಅವರು ಭೂಗತ ಪಾತಕಿಗಳಿಂದ ಜೀವ ಬೆದರಿಕೆ ಎದುರಿಸುತ್ತಿದ್ದು, ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಅವರನ್ನು ಬುಧವಾರ ಭೇಟಿಯಾಗಿ ಈ ಬೆಳವಣಿಗೆ ಬಗ್ಗೆ ಹೇಳಿಕೆ ನೀಡಿದ್ದಾರೆ.

ಕೆಲ ವಾರಗಳ ಹಿಂದೆ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಉದ್ಯಮಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್ ಹಾಕಿದ್ದ ವಿಚಾರ ಭಾರೀ ಸುದ್ದಿಯಾಗಿತ್ತು. ಆದರೆ ಈ ಸ್ಕೆಚ್ ಯಾರು ಹಾಕಿದ್ದಾರೆ ಎಂಬುದು ಸ್ವತಃ ಗುಣರಂಜನ್ ಶೆಟ್ಟಿಗೂ ಗೊತ್ತಿರಲಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಗೃಹ ಸಚಿವರಿಗೆ, ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಗುಣರಂಜನ್ ಶೆಟ್ಟಿ ಮನವಿ ಮಾಡಿಕೊಂಡಿದ್ದರು. ಪೊಲೀಸರೊಂದಿಗೆ ಮಾತುಕತೆ ನಡೆಸಿ ಹೊರಬಂದ ಬಳಿಕ ಮಂಗಳೂರು ಸುದ್ದಿಗಾರರ ಜೊತೆ ಮಾತಾಡಿದರು.

‘ನನ್ನ ಜೀವಕ್ಕೆ ಅಪಾಯ ಇರುವ ಬಗ್ಗೆ ನಂಬಲರ್ಹ ಮೂಲಗಳಿಂದ ಮಾಹಿತಿ ಸಿಕ್ಕಿತ್ತು. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದೆ. ಈ ಪ್ರಕರಣವನ್ನು ಮಂಗಳೂರಿನ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹಾಗಾಗಿ ಪೊಲೀಸ್‌ ಕಮಿಷನರ್‌ ಹಾಗೂ ಇತರ ಅಧಿಕಾರಿಗಳನ್ನು ಭೇಟಿಯಾಗಿದ್ದೆ. ಅವರು ತನಿಖೆಗೆ ಅಗತ್ಯವಿರುವ ಕೆಲವು ಮಾಹಿತಿಗಳನ್ನು ನನ್ನಿಂದ ಪಡೆದುಕೊಂಡರು’ ಎಂದು ತಿಳಿಸಿದರು.

ಮೂಲಗಳ ಮಾಹಿತಿ ಆಧರಿಸಿ ಗೃಹ ಇಲಾಖೆಗೆ ಮನವಿ ಮಾಡಿದ್ದೆ. ಸಾರ್ವಜನಿಕ ಜೀವನದಲ್ಲಿ ಇರುವುದರಿಂದ ಹಲವಾರು ಜನರೊಂದಿಗೆ ವ್ಯವಹಾರ ಇದೆ. ನಿಷ್ಠುರ ಇದ್ದವರು ಕೂಡ ಇದ್ದಾರೆ. ಮಂಗಳೂರು ಪೊಲೀಸರು ಮಾಹಿತಿ ನೀಡಲು ಬರುವಂತೆ ಸೂಚಿಸಿದ್ದರು. ನನಗೆ ಗೊತ್ತಿರುವ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದೇನೆ. ಇದರ ಹಿಂದೆ ಯಾರಿದ್ದಾರೆಂದು ಖಚಿತವಾಗಿ ಹೇಳಲು ಆಗುವುದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸತ್ಯ ಹೊರಬರಲಿದೆ. ಮನ್ವಿತ್‌ ಬಗ್ಗೆ ದೂರು ಹೇಳಿಲ್ಲ. ಆತನ ಜತೆ ಯಾವುದೇ ವೈಮನಸ್ಸಿಲ್ಲ ಎಂದು ತಿಳಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top