fbpx
ಸಮಾಚಾರ

ತಿಂಗಳ ಮೊದಲ ದಿನವೇ ಗುಡ್ ನ್ಯೂಸ್: ಸಿಲಿಂಡರ್ ಬೆಲೆ 198 ರೂ. ಇಳಿಕೆ

ತಿಂಗಳ ಮೊದಲ ದಿನವೇ ದೇಶದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ಪೆಟ್ರೋಲ್ ಮತ್ತು ಡೀಸೆಲ್‌ನ ಸ್ಥಿರ ಬೆಲೆಯ ನಡುವೆ, ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ದೊಡ್ಡ ರಿಲೀಫ್ ಸಿಕ್ಕಿದೆ. ಈ ಬಾರಿ ಎಲ್‌ಪಿಜಿ ಸಿಲಿಂಡರ್ ದರ 198 ರೂಪಾಯಿ ಇಳಿಕೆಯಾಗಿದೆ. ಬೆಲೆ ಏರಿಕೆಯ ತಲೆನೋವಿನಿಂದ ಬಳಲಿದ್ದ ಜನಸಾಮಾನ್ಯರಿಗೆ ಕೊಂಚ ನೆಮ್ಮದಿ ದೊರೆತಂತಾಗಿದೆ.

ಶುಕ್ರವಾರದಿಂದಲೇ ಜಾರಿಗೆ ಬರುವಂತೆ ದೆಹಲಿಯಲ್ಲಿ 19 ಕೆಜಿ ಎಲ್ ಪಿಜಿ ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ 198ರೂ. ಇಳಿಕೆಯಾಗಿದೆ. ಕೋಲ್ಕತ್ತದಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 182ರೂ. ಇಳಿಕೆಯಾಗಿದೆ. ಇನ್ನು ಮುಂಬೈನಲ್ಲಿ 190.50ರೂ. ಕಡಿಮೆಯಾಗಿದ್ರೆ, ಚೆನ್ನೈನಲ್ಲಿ 187 ರೂ. ತಗ್ಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಇಳಿಕೆಯಿಂದ ಸ್ವಲ್ಪ ಮಟ್ಟಿನ ನೆಮ್ಮದಿ ಸಿಕ್ಕಿದೆ.

ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿಲ್ಲ:
ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿಲ್ಲ. 14.2 ಕೆಜಿ ದೇಶೀಯ ಸಿಲಿಂಡರ್ ಬೆಲೆ ಅಗ್ಗವಾಗಿಲ್ಲ. ಕಳೆದ ಮೇ 19ರ ದರ ಹಾಗೆಯೇ ಮುಂದುವರಿದಿದೆ.ಮೇ 19 ರಂದು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾಗಿತ್ತು. ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು ಲೀಟರ್‌ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು, ಸದ್ಯ ಗೃಹ ಬಳಕೆಯ ಸಿಲಿಂಡರ್ ಬೆಲೆ ರಾಷ್ಟ್ರ ರಾಜಧಾನಿಯಲ್ಲಿ ರೂ1003 ಇದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top