fbpx
ಸಮಾಚಾರ

ಸಾಲುಮರದ ತಿಮ್ಮಕ್ಕಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ: ಜನ್ಮದಿನದಂದೇ ಸಿಕ್ತು ವಿಶೇಷ ಗಿಫ್ಟ್

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡಿ, ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಬೊಮ್ಮಾಯಿ, ಸಾಲುಮರದ ತಿಮ್ಮಕ್ಕನವರು ಪರಿಸರ ಸಂರಕ್ಷಣೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಸರ್ಕಾರದ ವತಿಯಿಂದ “ಪರಿಸರದ ರಾಯಭಾರಿ’ ಎಂಬ ವಿಶೇಷ ಪದವಿ ಹಾಗೂ ಮತ್ತಷ್ಟು ಪರಿಸರ ಸಂರಕ್ಷಣೆ ಕಾರ್ಯ ಕೈಗೊಳ್ಳಲು ನೆರವಾಗುವುದಕ್ಕಾಗಿ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತಿದೆ ಎಂದು ಹೇಳಿದರು.

“ರಾಜ್ಯದ ಉದ್ದಗಲಕ್ಕು ಪರಿಸರ ಸಂರಕ್ಷಣೆ ಮಾಡುವ ಸಲುವಾಗಿ ಅವರಿಗೆ ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜಕ್ಕೆ ತೆರಳಿದ್ದರು ಸಹ ಅದರ ಖರ್ಚನ್ನು ಸಹ ರಾಜ್ಯ ಸರ್ಕಾರವೇ ಭರಿಸುತ್ತದೆ. ವಾರ್ತಾ ಮತ್ತು ಪ್ರಸಾರ ಖಾತೆ ಇಲಾಖೆಯಿಂದ ಸಾಲು ಮರದ ತಿಮ್ಮಕ್ಕನವರ ಜೀವನಾಧಾರಿತ ವೆಬ್ ಸೀರಿಸ್ ಮಾಡಲಾಗುವುದು.” ಎಂದು ಹೇಳಿದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top