fbpx
ಸಮಾಚಾರ

ಗುಬ್ಬಿವೀರಣ್ಣ ಪುತ್ರಿ ಹಿರಿಯ ನಟಿ ಹೇಮಲತಾ ನಿಧನ : ದೇಹದಾನ ಮಾಡಿದ ಕುಟುಂಬ

ಪ್ರಖ್ಯಾತ ರಂಗಭೂಮಿ ಕಲಾವಿದ ದಿವಂಗತ ಗುಬ್ಬಿ ವೀರಣ್ಣ ಅವರ ಮಗಳು ಹೇಮಲತಾ ಅವರು ನಿಧನರಾಗಿದ್ದಾರೆ. ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಹೇಮಲತಾ ಅವರು ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯಲ್ಲಿ ವಾಸವಾಗಿದ್ದರು., ಗುಬ್ಬೀ ವೀರಣ್ಣನವರ ಪುತ್ರ ಗುರುಸ್ವಾಮಿ ಅವರ ಪುತ್ರಿ ಜಯಭಾರತಿ ಅವರು ಹೇಮಲತಾ ಅವರನ್ನು ನೋಡಿಕೊಳ್ಳುತ್ತಿದ್ದರು. ನಾಲ್ಕು ದಿನಗಳ ಹಿಂದೆಯಷ್ಟೇ ಲಘು ಹೃದಯಾಘಾತಕ್ಕೆ ಒಳಗಾಗಿ ಬಾಶೆಟ್ಟಿಹಳ್ಳಿ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಹೇಮಲತಾ ವಾರ ಪಾರ್ಥಿವ ಶರೀರವನ್ನು ಅವರ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾನ ಮಾಡಲು ನಿರ್ಧರಿಸಿದ್ದಾರೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ. ಮೃತದೇಹವನ್ನ ಬೆಂಗಳೂರಿನ ಹೆಸರಘಟ್ಟದ ರಸ್ತೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿಗೆ ಮೃತದೇಹ ಹಸ್ತಾಂತರ ಮಾಡಲು ತೀರ್ಮಾನಿಸಿದ್ದು, ಸಿನಿರಂಗದ ಹಲವರು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ.

ಅಂದಹಾಗೆ ಹೇಮಲತಾ ಅವರು ರಾಜ್ ಕುಮಾರ್ ಜೊತೆ ಎಮ್ಮೆ ತಮ್ಮಣ್ಣ, ಕಲ್ಯಾಣ್ ಕುಮಾರ್ ಅವರೊಂದಿಗೆ ಕಲಾವತಿ ಸಿನಿಮಾ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದು ಹಲವು ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top