ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
Super thrilled to share the launch of my recent film – today at @AgaKhanMuseum as part of its “Rhythms of Canada”
Link: https://t.co/RAQimMt7LnI made this performance doc as a cohort of https://t.co/D5ywx1Y7Wu@YorkuAMPD @TorontoMet @YorkUFGS
Feeling pumped with my CREW❤️ pic.twitter.com/L8LDDnctC9
— Leena Manimekalai (@LeenaManimekali) July 2, 2022
ಲೀನಾ ಅವರ ಸಾಕ್ಷ್ಯಚಿತ್ರದ ಹೆಸರು ಕಾಳಿ. ಈ ಪೋಸ್ಟರ್ನಲ್ಲಿ ಮಾ ಕಾಳಿ ಸಿಗರೇಟ್ ಸೇದುತ್ತಿರುವುದನ್ನು ತೋರಿಸಲಾಗಿದ್ದು, ಇದನ್ನು ನೋಡಿ ಸಾಮಾಜಿಕ ಜಾಲತಾಣಗಳಲ್ಲಿ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾ ಕಾಳಿಯ ವೇಷಭೂಷಣದಲ್ಲಿ, ಕಲಾವಿದರು ಒಂದು ಕೈಯಲ್ಲಿ ತ್ರಿಶೂಲವನ್ನು ಮತ್ತು ಒಂದು ಕೈಯಲ್ಲಿ LGBTQ ಸಮುದಾಯದ ಹೆಮ್ಮೆಯ ಧ್ವಜವನ್ನು ಹಿಡಿದಿದ್ದಾರೆ.LGBTQ-ಲೆಸ್ಬಿಯನ್, ಗೇ, ಬೈಸೆಕ್ಚುವಲ್ ಟ್ರಾನ್ಸ್ ಜೆಂಡರ್, ಕ್ವೀರ್ ಸಮುದಾಯವರದ್ದು.
ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತವರು ಎನ್ನುವುದು ವಿಶೇಷ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
