fbpx
ಸಮಾಚಾರ

ಜೇಮ್ಸ್ ನಿರ್ಮಾಪಕ ಆಸ್ಪತ್ರಗೆ ದಾಖಲು: ಸ್ಥಿತಿ ಗಂಭೀರ, ಕೋಮಾದಲ್ಲಿ ನಿರ್ಮಾಪಕ, ಐಸಿಯು ನಲ್ಲಿ ಚಿಕಿತ್ಸೆ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೊನೆಯ ಸಿನಿಮಾಗಳಲ್ಲಿ ಒಂದಾಗಿರುವ ‘ಜೇಮ್ಸ್’ ಚಿತ್ರವನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ ಕಿಶೋರ್ ಪಟ್ಟಿಕೊಂಡ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಿಶೋರ್ ಅವರಿಗೆ ಹೈ ಬಿಪಿಯಿಂದ ಸ್ಟ್ರೋಕ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಿನ್ನೆ ರಾತ್ರಿ ಬಿಪಿ ಹೆಚ್ಚಾದ ಕಾರಣದಿಂದಾಗಿ ಅವರು ಪ್ರಜ್ಞೆ ತಪ್ಪಿದ್ದರಂತೆ. ಕೂಡಲೇ ಬೆಂಗಳೂರಿನ ಶೇಷಾದ್ರಿ ಪುರಂ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

BP ಹೆಚ್ಚಾದ ಜೊತೆಗೆ ಅವರಿಗೆ ಸ್ಟ್ರೋಕ್ ಕೂಡ ಆಗಿದೆ ಎಂದು ಹೇಳಲಾಗುತ್ತಿದ್ದು, ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರಂತೆ. ನಿನ್ನೆ ರಾತ್ರಿಯೇ ಅವರಿಗೆ ಪಿಬಿ ಹೆಚ್ಚಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಾಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಆಪ್ತರು ತಿಳಿಸಿದ್ದಾರೆ. ಸದ್ಯ ಕಿಶೋರ್ ಅವರನ್ನು ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗತ್ತಿದೆ ಎನ್ನಲಾಗಿದೆ. ಕಿಶೋರ್ ಸ್ಥಿತಿ ಗಂಭೀರವಾಗಿದ್ದು ಕೋಮಾದಲ್ಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top