fbpx
ಸಮಾಚಾರ

ಶಾಕಿಂಗ್! ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಕೊಲೆ: ಹಾಡಹಗಲೇ ಹತ್ಯೆ

ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಅವರನ್ನು ಹಾಡಗಾಗಲೇ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಈ ಆಘಾತಕಾರಿ ಕೊಲೆಯಾಗಿದ್ದಾರೆ. ಭಕ್ತರು ಎಂಬ ಹೇಳಿಕೊಂಡು ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಓಡಿ ಹೋಗಿದ್ದಾರೆ.

ಕೊಲೆ ನಡೆದ ಸ್ಥಳಕ್ಕೆ ಪೊಲೀಸರು ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಆಗಮಿಸಿದ್ದು, ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್‌ ನಲ್ಲಿ ರಿಸಪ್ಶನ್‌ನಲ್ಲಿಯೇ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಚಂದ್ರಶೇಖರ್ ಅವರ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಬಂದಿದೆ.

ಚಂದ್ರಶೇಖರ್‌ ಅವರುವಾಸ್ತು ವಿನ್ಯಾಸದ ಬಗ್ಗೆ ಸಲಹೆ ನೀಡುವ ಮೂಲಕ ಹೆಸರುವಾಸಿಯಾಗಿದ್ದರು. ವಾಸ್ತು ಶಾಸ್ತ್ರದ ಬಗ್ಗೆ ಹಲವು ಪುಸ್ತಕಗಳನ್ನೂ ಕೂಡ ಬರೆದಿದ್ದರು. ಸರಳ ವಾಸ್ತು ವಿಷಯದ ಬಗ್ಗೆ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಹೆಸರುವಾಸಿಯಾಗಿದ್ದರು.

ಈವರೆಗೂ 2 ಸಾವಿರಕ್ಕೂ ಅಧಿಕ ಸೆಮಿನಾರ್‌ಗಳಲ್ಲಿ ಮಾತನಾಡಿರುವ ಚಂದ್ರಶೇಖರ್‌, ಈವರೆಗೂ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 16 ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಕಾಸ್ಮಿಕ್ ಆರ್ಕಿಟೆಕ್ಚರ್ ನಲ್ಲಿ ಡಾಕ್ಟರೇಟ್ ಪದವಿಯನ್ನೂ ಅವರು ಸಂಪಾದಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top