fbpx
ಸಮಾಚಾರ

ಹೆಬ್ಬುಲಿ ನಟಿ ಅಮಲಾ ಪೌಲ್ 2ನೇ ಮದುವೆ: ಹುಡುಗ ಯಾರು?

ಕನ್ನಡದಲ್ಲಿ ಕಿಚ್ಚ ಸುದೀಪ್ ನಟನೆಯ ಹೆಬ್ಬುಲಿ ಚಿತ್ರದಲ್ಲಿ ನಟಿಸಿರುವ ಅಮಲಾ ಪೌಲ್ ಅವರ ಬಗೆಗಿನ ನ್ಯೂಸ್ ಒಂದು ಸದ್ಯ ಸೌತ್ ಸಿನಿ ದುನಿಯಾದಲ್ಲಿ ಗಿರಕಿ ಹೊಡೆಯುತ್ತಿದೆ. ಅದೇನೆಂದರೆ ಅಮಲಾ ಪೌಲ್ ಅವರು ಎರಡನೇ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಸುದ್ದಿ.,

ಅಭಿಮಾನಿಯೊಬ್ಬರ ಪ್ರಶ್ನೆಗೆ ಉತ್ತರಿಸಿರುವ ಅಮಲಾ ಪೌಲ್, ತಾವು ಮದುವೆ ಆಗುವ ಹುಡುಗ ಹೇಗಿರಬೇಕು ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ಮತ್ತೊಂದು ಮದುವೆಗೆ ಸಿದ್ಧತೆ ನಡೆಸಿರುವ ಕುರಿತು ಸಣ್ಣದೊಂದು ಸುಳಿವು ಕೊಟ್ಟಿದ್ದಾರೆ. ಒಬ್ಬರನೊಬ್ಬರು ನಂಬುವಂತಹ ಹುಡುಗ ಸಿಗಬೇಕು ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈ ಉತ್ತರ ತೆಲುವು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ.

ಅಂದಹಾಗೆ 2014ರಲ್ಲಿ ಅಮಲಾ ಪೌಲ್‌ ನಿರ್ದೇಶಕ ವಿಜಯ್ ಮದುವೆಯಾಗಿದ್ದರು. ಆ ಬಳಿಕ ಭಿನ್ನಾಭಿಪ್ರಾಯಗಳ ಕಾರಣ ಇವರ ದಾಂಪತ್ಯ ಜೀವನ ಮುರಿದು ಬಿತ್ತು. ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ 2017ರಲ್ಲಿ ವಿಚ್ಛೇದನ ಪಡೆದರು. ಅಮಲಾ ಪೌಲ್ ಮತ್ತು ವಿಜಯ್ ಪ್ರೀತಿಸಿ ಮದುವೆಯಾದವರು. ಆದರೆ ಮದುವೆಯಾದ ಎರಡೇ ವರ್ಷಕ್ಕೆ ಡೈವೋರ್ಸ್ ಪಡೆದುಕೊಂಡದ್ದು ಎಲ್ಲರ ಅಚ್ಚರಿಗೆ ಕಾರಣವಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top