fbpx
ಸಮಾಚಾರ

ಶಿಂಜೋ ಅಬೆ ಹತ್ಯೆಗೆ ಕಾರಣ ತಿಳಿಸಿದ ಹಂತಕ: ಶಿಂಜೋ ಅಬೆ ಹಂತಕ ಯಮಗಾಮಿ ಹೇಳಿಕೆ

ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದು ಏಕೆ? ಇಂಥ ಪ್ರಶ್ನೆ ಜಗತ್ತಿನ ಎಲ್ಲೆಡೆ ಕೇಳಲಾಗುತ್ತಿದೆ. ಹತ್ಯೆ ಮಾಡಿದ ವ್ಯಕ್ತಿಯನ್ನು ನರಾ ಎಂಬ ನಗರದ ನಿವಾಸಿ ಟೆಸ್ಯೋ ಯಮಗಾಮಿ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಿ, ವಿಚಾರಣೆ ನಡೆಸಲಾಗಿದ್ದು ಪೊಲೀಸರ ಮುಂದೆ ಹತ್ಯೆಗೆ ಕಾರಣ ತಿಳಿಸಿದ್ದಾನೆ.

ಯಮಗಾಮಿ ಸೇನೆಯಲ್ಲಿ ಸೇವೆಸಲ್ಲಿಸಿದ ಬಳಿಕ ನಿರುದ್ಯೋಗಿಯಾಗಿದ್ದ. ಹಾಗಾಗಿ ನಿರುದ್ಯೋಗದಿಂದ ಬೇಸತ್ತು ಮತ್ತು ಶಿಂಜೋ ಅಬೆಯ ರಾಜಕೀಯ ನಡೆಯಿಂದ ಅಸಮಾಧಾನಗೊಂಡು ಹತ್ಯೆಗೆ ಮುಂದಾಗಿದ್ದ. ಹತ್ಯೆಗಾಗಿ ತಾನೇ ತಯಾರಿಸಿದ್ದ ಗನ್ ಬಳಕೆ ಮಾಡಿದ್ದ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ.

ಗನ್ ಅನ್ನು ತಾನೇ ತಯಾರು ಮಾಡಿಕೊಂಡಿದ್ದ:
ಹಂತಕ ಬಳಸಿದ್ದ ಸ್ಟೆನ್‌ ಗನ್‌ ಅನ್ನು ಆತ ಖುದ್ದಾಗಿ ಕೈಯಾರೆ ಮನೆ ಯಲ್ಲಿ ತಯಾರಿಸಿದ್ದ ಎಂಬ ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಜಪಾನ್‍ನಲ್ಲಿ ಶಸ್ತ್ರಾಸ್ತ್ರ ಕಾನೂನುಗಳು ಅತ್ಯಂತ ಕಠಿಣವಾಗಿದ್ದು, ಯಾವುದೇ ವ್ಯಕ್ತಿ ಪರವಾನಗಿ ಇಲ್ಲದೆ ಶಸ್ತ್ರಾಸ್ತ್ರ ಹೊಂದುವಂತಿಲ್ಲ. ಪರವಾನಗಿ ಕೂಡ ಜಪಾನ್‍ನಲ್ಲಿ ಅಷ್ಟು ಸುಲಭವಾಗಿ ಸಿಗುವುದಿಲ್ಲ. ಹಾಗಾಗಿ ಯಮಗಾಮಿ ತಾನೇ ಗನ್ ತಯಾರಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top