fbpx
ಸಮಾಚಾರ

ಹಿರಿಯ ನಟ ಪ್ರತಾಪ್ ನಿಧನ

ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಮತ್ತು 12ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಪ್ರತಾಪ್ ಪೋಥೆನ್ ತಮ್ಮ ಚೆನ್ನೈನ ಅಪಾರ್ಟಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮಲಯಾಳಂ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಯ ಚಿತ್ರಗಳಲ್ಲಿ ಪ್ರತಾಪ್​ ಪೋಥೆನ್ ನಟಿಸಿದ್ದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಿರಿಯ ನಟನ ನಿಧನಕ್ಕೆ ಕಾರಣ ಏನು ಎಂಬುದು ಇನ್ನೂ ಪತ್ತೆ ಆಗಿಲ್ಲ. ಅನಾರೋಗ್ಯದಿಂದ ಅವರು ಕೊನೆಯುಸಿರು ಎಳೆದಿರಬಹುದು ಎಂದು ಊಹಿಸಲಾಗುತ್ತಿದೆ.

ಹಲವು ದಿನಗಳಿಂದ ಇವರು ಅನಾರೋಗ್ಯದಿಂದ ಬಳಲುತ್ತಿದ್ದರು. ಒಂಟಿಯಾಗಿ ವಾಸಿಸುತ್ತಿದ್ದರಿಂದ ಸಾವಿನ ಬಗ್ಗೆ ನಿಖರ ಮಾಹಿತಿ ತಿಳಯಬೇಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಂದಹಾಗೆ ತಮಿಳು ನಟಿ ರಾಧಿಕಾರನ್ನು ಪ್ರತಾಪ್ ವಿವಾಹವಾಗಿ ಒಂದು ವರ್ಷಕ್ಕೆ ವಿಚ್ಛೇದನ ನೀಡಿದ್ದರು ಆನಂತರ ಅಮಲಾರನ್ನು ಮದುವೆಯಾಗಿ 22 ವರ್ಷಗಳ ಕಾಲ ವೈವಾಹಿಕ ಜೀವನ ನಡೆಸಿ 2012ರಲ್ಲಿ ಡಿವೋರ್ಸ್‌ ನೀಡಿದ್ದಾರೆ. ಇವರಿಗೆ ಕೀಯಾ ಎಂಬ ಮುದ್ದಾದ ಮಗಳಿದ್ದಾಳೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top