fbpx
ಸಮಾಚಾರ

ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಚಿತ್ರೀಕರಣ ಬಂದ್! ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೆ ಸರ್ಕಾರಿ ವ್ಯಕ್ತಿಗಳ ಫೋಟೋ ಆಗಲಿ ಅಥವಾ ವಿಡಿಯೋ ಮಾಡುವ ಮುನ್ನ ಹುಷಾರ್. ಏಕೆಂದರೆ ಇದೀಗ ಸರ್ಕಾರಿ ಕಚೇರಿಗಳಲ್ಲಿ ಇವೆಲ್ಲ ಕರ್ತವ್ಯಗಳನ್ನುನಿಷೇಧಿಸಿರುವ ಬಗ್ಗೆ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

ಇತ್ತೀಚಿಗೆ ಕೆಲವು ವ್ಯಕ್ತಿಗಳು ಸರ್ಕಾರಿ ಕಚೇರಿಗಳಲ್ಲಿನ ಫೋಟೋಗಳನ್ನು ಹಿಡಿದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ದುರ್ಬಳಿಕೆ ಮಾಡುತ್ತಿರುವ ಆರೋಪ ಕೇಳಿ ಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದೀಗ ಈ ಮನವಿಯನ್ನು ಪರಿಗಣಿಸಿ ಸರ್ಕಾರ ಆದೇಶವನ್ನು ಹೊರಡಿಸಿದೆ.

 

 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸಲ್ಲಿಸಿರುವ ಮನವಿ ಏನೆಂದರೆ ‘ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು, ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೊ / ವಿಡಿಯೊ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಇಲಾಖೆ ಹಾಗೂ ಸರ್ಕಾರದ ಘನತೆಗೆ ಕುಂದುಂಟು ಮಾಡುತ್ತಿದ್ದಾರೆ. ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆಯಾಗುತ್ತಿದೆ’ ಎಂದು ತಿಳಿಸಿತು.

ಇವರ ಮನವಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ.ವೆಂಕಟೇಶಪ್ಪ ನವರು “ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೊ / ವಿಡಿಯೊ ಮಾಡುವುದನ್ನು ನಿಷೇದಿಸಲಾಗಿದೆ” ಎಂದು ಆದೇಶವನ್ನು ಹೊರಡಿಸಿತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top