fbpx
ಸಮಾಚಾರ

ಪುನೀತ್ ರಾಜ್ ಕುಮಾರ್ ಗಂಧದ ಗುಡಿ ರಿಲೀಸ್ ಡೇಟ್ ಘೋಷಣೆ

ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಗೆಲ್ಲಾ ಗುಡ್ ನ್ಯೂಸ್ ಇಲ್ಲಿದೆ. ಎಲ್ಲರ ಪ್ರೀತಿಯ ಅಪ್ಪು ಕಾಣಿಸಿಕೊಂಡಿರುವ ಕೊನೆಯ ಚಿತ್ರ ‘ಗಂಧದ ಗುಡಿ’. ಈ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ‘ಗಂಧದ ಗುಡಿ’ ಸಿನಿಮಾದ ರಿಲೀಸ್ ಡೇಟ್‌ಅನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಇಂದು ಘೋಷಿಸಿದ್ದಾರೆ.

 

 

ಪುನೀತ್ ನಿಧನ ಹೊಂದಿದ ಒಂದು ದಿನಾಂಕಕ್ಕಿಂತ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ತೆರೆಗೆ ಅಪ್ಪಳಿಸಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು, ‘ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್​​ಗೆ ಫ್ಯಾನ್ಸ್ ಭಾವುಕರಾಗಿ ಕಮೆಂಟ್ ಹಾಕುತ್ತಿದ್ದಾರೆ.

ಈ ಸಾಕ್ಷ್ಯ ಚಿತ್ರದ ಬಗ್ಗೆ ಪುನೀತ್ ರಾಜ್ ಕುಮಾರ್ ಅಪಾರ ಕನಸು ಕಟ್ಟಿಕೊಂಡಿದ್ದರು. ಪುನೀತ್ ಅವರು ಕುಮಟಾ, ಗೋಕರ್ಣ, ಮುರುಡೇಶ್ವರ, ಜೊಯಿಡಾ ತಾಲೂಕಿನಲ್ಲಿ ತಿರುಗಾಡಿ ಚಿತ್ರೀಕರಣ ನಡೆಸಿದ್ದರು. ಅವರು ಕಡಲತೀರಗಳಲ್ಲಿ ಓಡಾಡಿ, ಸ್ಟಂಟ್ ಗಳನ್ನೂ ಮಾಡಿದ್ದರು. ವನ್ಯಜೀವಿ ಫೋಟೋಗ್ರಾಫರ್ ಅಮೋಘ ವರ್ಷ ಸಾರಥ್ಯದಲ್ಲಿ ಡಾಕ್ಯುಮೆಂಟರಿ ಚಿತ್ರೀಕರಣ ಮಾಡಲಾಗಿದೆ.

ಅಂದುಕೊಂಡಂತೆ ಆಗಿದ್ದರೆ, ಅಪ್ಪು ಬದುಕಿದ್ದಾಗಲೇ ಈ ಸಿನಿಮಾದ ಟೀಸರ್ ರಿಲೀಸ್ ಆಗಬೇಕಿತ್ತು. ಅದಕ್ಕೆ ಸಮಯವನ್ನೂ ನಿಗಧಿ ಮಾಡಿದ್ದರು. ಆದರೆ, ಅವರು ಅಷ್ಟರಲ್ಲಿ ನಿಧನರಾದರು. ಹಾಗಾಗಿ ಅವರ ಕನಸಿನ ಕೂಸನ್ನು ಅದ್ಧೂರಿಯಾಗಿಯೇ ರಿಲೀಸ್ ಮಾಡಬೇಕು ಎನ್ನುವುದು ಅಶ್ವಿನಿ ಅವರ ಕನಸಾಗಿತ್ತು. ಹೀಗಾಗಿ ಥಿಯೇಟರ್ ನಲ್ಲೇ ಈ ಸಾಕ್ಷ್ಯ ಚಿತ್ರ ರಿಲೀಸ್ ಆಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top