fbpx
ಸಮಾಚಾರ

ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ! ಏಕದಿನ ಕ್ರಿಕೆಟ್ ಗೆ ನಿವೃತಿ ಘೋಷಿಸಿದ ಸ್ಟಾರ್ ಆಟಗಾರ!

ಸ್ಟಾರ್ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಸೋಮವಾರ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 31ರ ಹರೆಯದ ಇವರು ಮಂಗಳವಾರ ಡರ್ಹಾಮ್‌ನಲ್ಲಿರುವ ತಮ್ಮ ತವರು ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನು ಆಡಲಿದ್ದಾರೆ.

 

 

ಬೆನ್ ಸ್ಟೋಕ್ಸ್ ಅವರನ್ನು ಇತ್ತೀಚೆಗೆ ಇಂಗ್ಲೆಂಡ್ ಟೆಸ್ಟ್ ನಾಯಕರನ್ನಾಗಿ ನೇಮಿಸಲಾಗಿತ್ತು. ಬೆನ್ ಸ್ಟೋಕ್ಸ್ 2019 ರ ಇಂಗ್ಲೆಂಡ್‌ನ ವಿಶ್ವಕಪ್ ವಿಜಯೋತ್ಸವದ ಹೀರೋಗಳಲ್ಲಿ ಒಬ್ಬರಾಗಿದ್ದರು ಮತ್ತು ಮೂರು ವರ್ಷಗಳ ಹಿಂದೆ ಲಾರ್ಡ್ಸ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಫೈನಲ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ತಮ್ಮ ನಿವೃತಿ ಬಗ್ಗೆ ಟ್ವೀಟ್ ಮಾಡಿರುವ ಬೆನ್ ಸ್ಟೋಕ್ಸ್ ” ಡರ್ಹಮ್ ನಲ್ಲಿ ಮಂಗಳವಾರ ನಡೆಯುವ ಪಂದ್ಯ ನನ್ನ ಕೊನೆಯ ಪಂದ್ಯವಾಗಿದ್ದು, ಇದಾದನಂತರ ನಾನು ಏಕದಿನ ಕ್ರಿಕೆಟ್ ನಿಂದ ನಿವೃತಿ ಹೊಂದುತ್ತೇನೆ” ಎಂದು ತಿಳಿಸಿದ್ದಾರೆ.

ಸ್ಟೋಕ್ಸ್ ಇದುವರೆಗೆ ಇಂಗ್ಲೆಂಡ್ ಪರ 104 ODIಗಳನ್ನು ಆಡಿದ್ದು, 39.44 ಸರಾಸರಿಯಲ್ಲಿ 2,919 ರನ್ ಗಳಿಸಿದ್ದಾರೆ. 2011ರಲ್ಲಿ ಐರ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಸ್ಟೋಕ್ಸ್ ಮೂರು ಶತಕ ಸೇರಿದಂತೆ 2919 ರನ್ ಗಳಿಸಿ 74 ವಿಕೆಟ್ ಪಡೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top