fbpx
ಸಮಾಚಾರ

ಕಂಬಳದ ಉಸೇನ್​ ಬೋಲ್ಟ್​ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್​ ದೂರು

‘ಕಂಬಳದ ಉಸೇನ್ ಬೋಲ್ಟ್’ ಹೆಸರಿನಿಂದ ಜನಪ್ರಿಯವಾಗಿರುವ ಮತ್ತು ‘ಕರ್ನಾಟಕ ಕ್ರೀಡಾ ರತ್ನ’ ಪ್ರಶಸ್ತಿ ವಿಜೇತ ಅಶ್ವತ್ ಪುರ ಶ್ರೀನಿವಾಸ್ ಗೌಡ ಅವರ ವಿರುದ್ಧ ಕ್ರಿಮಿನಲ್ ದೂರು ದಾಖಲಾಗಿದೆ. ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ 2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ. ದೂರವನ್ನು 9.55 ಸೆಕೆಂಡ್​ನಲ್ಲಿ ಕ್ರಮಿಸಿದ್ದರು ಎಂದು ಎಲ್ಲಡೆ ಸುದ್ದಿಯಾಗಿತ್ತು ಆನಂತರ ಶ್ರೀನಿವಾಸಗೌಡ ಆರು ಹೆಚ್ಚಿನ ಖ್ಯಾತಿ ಗಳಿಸಿದರು

ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಆರೋಪ ಕೇಳಿಬಂದಿದ್ದು ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬುವವರು ದೂರು ನೀಡಿದ್ದಾರೆ.

ಕ್ರಿಮಿನಲ್​ ದೂರಿನಲ್ಲಿ ಇರುವ ಮಾಹಿತಿಯ ಪ್ರಕಾರ ಅಧಿಕೃತ ಮಾನ್ಯತೆ ಪಡೆಯದ, ನಂಬಲಾರ್ಹವಲ್ಲದ ಸ್ಕೈ ವೀವ್ ಸಂಸ್ಥೆಯು ಶ್ರೀನಿವಾಸ ಗೌಡ ದಾಖಲೆಯ ವಿಚಾರದಲ್ಲಿ ಸುಳ್ಳು ದಾಖಲೆಗಳನ್ನು ನೀಡಿದೆ. ಉಸೇನ್​ ಬೋಲ್ಟ್​​ ದಾಖಲೆ ಮುರಿದಿದ್ದೇನೆ ಎಂದು ಹೇಳಿಕೊಂಡು ಸರ್ಕಾರ ಹಾಗೂ ವಿವಿಧ ಸಂಸ್ಥೆಗಳಿಂದ ಈ ಮೂವರು ಲಕ್ಷಾಂತರ ಹಣವನ್ನು ಪಡೆದಿದ್ದಾರೆ. ಈ ಮೂಲಕ ಕಂಬಳದ ಘನತೆಗೆ ಈ ಧಕ್ಕೆ ತಂದಿದ್ದಾರೆ. ಇವರ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಾಗದೇ ಇದ್ದಲ್ಲಿ ಕೋರ್ಟ್​ ಮೂಲಕ ಕಾನೂನು ಹೋರಾಟ ನಡೆಸೋದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ್ ವಿರುದ್ದ ಕೂಡ ದೂರು ದಾಖಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top