fbpx
ಸಮಾಚಾರ

ಸೆನ್ಸಾರ್ ನಲ್ಲಿ ವಿಕ್ರಾಂತ್ ರೋಣ ಪಾಸ್: ಸಿಕ್ಕಿದ್ದು ಯಾವ ಸರ್ಟಿಫಿಕೇಟ್? ಸಿನಿಮಾ ಅವಧಿ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಮೇಲೆ ವಿಪರೀತ ಕುತೂಹಲ ಹುಟ್ಟುಕೊಂಡಿರೋದು ಎಲ್ಲರಿಗೂ ಗೊತ್ತಿರೋ ವಿಚಾರ, ಚಿತ್ರದ ಬಗ್ಗೆ ಸುದೀಪ್ ಅಭಿಮಾನಿಗಳು ಸೇರಿದಂತೆ ಸಿನಿರಸಿಕರೆಲ್ಲರಲ್ಲೂ ತಲೆಕೆಡಿಸಿಕೊಂಡು ಕೂತಿದ್ದಾರೆ. ಅದ್ಧೂರಿ ಮೇಕಿಂಗ್, ಪೋಸ್ಟರ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವಂತಹ ಸ್ಟಿಲ್ಲುಗಳ ಮೂಲಕವೇ ಭಾರಿ ಸಂಚಲನ ಸೃಷ್ಟಿಸಿರುವ ಈ ಚಿತ್ರ ಎಬ್ಬಿಸಿರೋ ಅಲೆ ಕಂಡು ಬಹುತೇಕರು ಅಚ್ಚರಿಗೊಂಡಿದ್ದಾರೆ. ಚಿತ್ರದ ಮೇಲಿನ ನಿರೀಕ್ಷೆ ಕೋಡಿಯೊಡೆಯುತ್ತಿದೆ.

 

 

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್, ಟ್ರೈಲರ್ ಮತ್ತು ಹಾಡುಗಳೂ ಕೂಡ ಅತಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಇದೀಗ ವಿಕ್ರಾಂತ್ ರೋಣ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ವಿಕ್ರಾಂತ್ ರೋಣ ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿಯವರು ‘ಯು/ಎ’ ಸರ್ಟಿಫಿಕೇಟ್​ ನೀಡಿದ್ದಾರೆ. ಅಂದರೆ, ಈ ಸಿನಿಮಾವನ್ನು ಎಲ್ಲರೂ ನೋಡಬಹುದು. ಆದರೆ, 12 ವರ್ಷಕ್ಕಿಂತ ಕೆಳಗಿನವರು ತಂದೆ-ತಾಯಿಯ ಜತೆಯಲ್ಲಿ ಈ ಚಿತ್ರ ನೋಡಬೇಕಾಗುತ್ತದೆ. ಇನ್ನು ವಿಕ್ರಾಂತ್ ರೋಣ ಚಿತ್ರದ ಅವಧಿ 147 ನಿಮಿಷ ಅಂದ್ರೆ 2 ಗಂಟೆ 27 ನಿಮಿಷ ಎಂಬ ವಿಚಾರ ಕೂಡ ಬಯಲಾಗಿದೆ.

ಅನುಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಮುಂದಿನ ವಾರ ಅಂದ್ರೆ ಜುಲೈ 28 ರಂದು ವಿಶ್ವಾದ್ಯಂತ 3D ಅವತರಣಿಕೆಯಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್, ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಜಾಕ್ ಮಂಜುನಾಥ್ ಅವರು ಶಾಲಿನಿ ಆರ್ಟ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದು, ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಣ ಮಾಡುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top