fbpx
ಸಮಾಚಾರ

ಖ್ಯಾತ ಕಿರುತೆರೆ ನಟ ಯಲಹಂಕ ಬಾಲಾಜಿ ನಿಧನ

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ಧಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಹಿರಿಯ ನಟ ಬಾಲಾಜಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ.

ನಟನೆ ಹಾಗೂ ಫೋಟೋಗ್ರಫಿಯಲ್ಲಿ ಯಲಹಂಕ ಬಾಲಾಜಿ ಅವರು ಆಸಕ್ತಿ ಹೊಂದಿದ್ದರು. ‘ಮಾಯಾಮೃಗ’, ‘ಮುಕ್ತ ಮುಕ್ತ’, ‘ಮಹಾ ಪರ್ವ’, ‘ಮನ್ವಂತರ’, ‘ಮುಕ್ತ’, ‘ಮಿಂಚು’, ‘ಮಗಳು ಜಾನಕಿ’, ‘ಚಂದಿರ’ ಮುಂತಾದ ಧಾರಾವಾಹಿಗಳಲ್ಲಿ ಯಲಹಂಕ ಬಾಲಾಜಿ ಅಭಿನಯಿಸಿದ್ದರು.

 

 

ಹಿರಿಯ ನಟ ಬಾಲಾಜಿ ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಕೊಂಡಿದ್ದರು. ಹಿರಿಯ ಕಲಾವಿದನ ಅಗಲಿಕೆಗೆ ಸ್ಯಾಂಡಲ್​ವುಡ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ನಟ ಬಾಲಾಜಿ ನಿಧನಕ್ಕೆ ನಿರ್ದೇಶಕ ಟಿ.ಎನ್. ಸೀತಾರಾಮ್ ಸಂತಾಪ ಸೂಚಿಸಿದ್ಧಾರೆ. ” ನನ್ನ ಆತ್ಮೀಯ ಗೆಳೆಯ ಯಲಹಂಕ ಬಾಲಾಜಿ ಅಲ್ಪ ಕಾಲದ ಅನಾರೋಗ್ಯದ ನಂತರ ನಿಧನ ಹೊಂದಿದ್ದಾರೆ.ನನ್ನ ಎಲ್ಲಾ ಧಾರಾವಾಹಿ ಗಳಲ್ಲೂ ನಟಿಸಿದ್ದರು.ಮಾಯಾಮೃಗ ದಿಂದ , ಮಗಳು ಜಾನಕಿಯ ವರೆಗೆ….. ಅತ್ಯಂತ ಹೃದಯವಂತ ಗೆಳೆಯ.ಎಲ್ಲ ಕಷ್ಟ ಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ ನಗುತ್ತಾ ಬದುಕಿದ ಗೆಳೆಯ. ಬಾಲಾಜಿ ಇನ್ನಿಲ್ಲ ಎಂದು ನೆನೆಸಿಕೊಂಡರೆ ಅಪಾರ ಸಂಕಟವಾಗುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top