fbpx
ಸಮಾಚಾರ

ನವದೆಹಲಿಯಲ್ಲಿ 68 ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ ಪ್ರಕಟ! ಕನ್ನಡದ 4 ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ! ಯಾವುವು ಗೊತ್ತಾ?

ನೆನ್ನೆ ನವದೆಹಲಿಯಲ್ಲಿ 68 ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಹಲವಾರು ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿತು. ಇದಲ್ಲದೆ ನಮ್ಮ ಕನ್ನಡದ 4 ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ.

ಕನ್ನಡದ ಹೆಸರಾಂತ ನಿರ್ದೇಶಕರಾದ ಸಾಗರ್ ಪುರಾಣಿಕ್ ಮತ್ತು ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿದ್ದು, ನಮ್ಮ ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾ, ಇದಲ್ಲದೆ ಗಿರೀಶ್ ಕಾಸರವಳ್ಳಿ ನಿರ್ದೇಶನದ, ‘ನಾದದ ನವನೀತ’ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ.

ಪರಿಸರದ ಬಗ್ಗೆ ಕಾಳಜಿ ತೋರಿಸುವ ಉದ್ದೇಶದಿಂದ ನಿರ್ಮಾಣವಾದ ಸಿನಿಮಾ ಎಂದರೆ ಅದು ನಟ ಸಂಚಾರಿ ವಿಜಯ್ ಅಭಿನಯದ ತಲೆದಂಡ ಸಿನಿಮಾ. ಹೀಗಾಗಿ ಪರಿಸರದ ಬಗ್ಗೆ ಕಾಳಜಿ ಈ ಸಿನಿಮಾದಲ್ಲಿ ಇರುವ ಕಾರಣ ಇದಕ್ಕೆ ರಾಷ್ಟ್ರ ಪ್ರಶಸ್ತಿ ದೊರಕಿದೆ. ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top