fbpx
ಸಮಾಚಾರ

2022 ರ ‘Mrs. ಇಂಡಿಯಾ’ ಗೆದ್ದು ಬಂದ ನಿವೇದಿತಾ ಗೌಡ!

ಕನ್ನಡ ರಾಪರ್ ಚಂದನ್ ಶೆಟ್ಟಿ ಅವರ ಪತ್ನಿ ಬಾರ್ಬಿ ಡಾಲ್ ಎಂದೇ ಪ್ರಖ್ಯಾತರಾಗಿರುವ ನಿವೇದಿತಾ ಗೌಡ ಅವರು ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇಷ್ಟೊಂದು ಅಭಿಮಾನಿಗಳನ್ನು ಸಂಪಾದಿಸಿರುವ ಇವರು ಇದೀಗ ಇವರ ಹೆಸರಿಗೆ ಮತ್ತೊಂದು ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

 

 

ನಿವೇದಿತಾ ಗೌಡ ಅವರು ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಕುರಿತು ಸ್ವತಃ ಅವರೇ ಮಾಹಿತಿಯನ್ನು ಹಂಚಿಕೊಂಡಿದ್ದರು. ಈ ಕುರಿತು ತಾವು ಏನೆಲ್ಲಾ ತಯಾರಿಕೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂಬುದರ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದರು. ಇದೀಗ ಇವರ ಪರಿಶ್ರಮಕ್ಕೆ ಗೆಲುವು ಸಿಕ್ಕಿದೆ ಎಂದು ಹೇಳಬಹುದು. ಏಕೆಂದರೆ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ನಿವೇದಿತಾ ಗೌಡ ಅವರು ಗೆಲುವನ್ನು ಧಾಖಲಿಸಿದ್ದಾರೆ.

ಅಭಿಮಾನಿಗಳ ಆರೈಕೆಯಂತೆ ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.
‘ವಿನ್ನರ್ ಆಫ್ ಪೀಪಲ್ಸ್ ಚಾಯ್ಸ್ 2022 ಆಫ್ Mrs.ಇಂಡಿಯಾ.’ ಎನ್ನುವ ಬಿರುದನ್ನು ನಿವೇದಿತಾ ಮುಡಿಗೇರಿಸಿಕೊಂಡಿದ್ದು, ಜನರ ಆಯ್ಕೆಯ ವಿಭಾಗದಲ್ಲಿ ಈ ಪ್ರಶಸ್ತಿಗೆ ಪಡೆದುಕೊಂಡಿದ್ದಾರೆ.

ಪ್ರಶಸ್ತಿ ಮುಡಿಗೇರಿಸಿದ ನಂತರ ನಿವೇದಿತಾ ಗೌಡ ಫೋಟೋ ಹೊಂಚಿಕೊಳ್ಳುವ ಮೂಲಖ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತಸವನ್ನು ಹಂಚಿಕೊಂಡರು. “ಕೊನೆಯದಾಗಿ, ಜನರ ಹೃದಯವನ್ನು ಗೆದ್ದು, ಯಾವುದಾದರೂ ಒಂದು ರೀತಿಯಲ್ಲಿ ನಾವು ಅವರ ಮನ ಮುಟ್ಟುವುದೇ ನಿಜವಾದ ಸಾಧನೆ ಅಲ್ಲವೇ? ಮಿಸೆಸ್ ಇಂಡಿಯಾ ಇಂಕ್‌ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾದ ಶ್ರೀಮತಿ ನಿವೇದಿತಾ ಗೌಡ ಅವರು ತಮ್ಮ ಉಪಸ್ಥಿತಿಯಿಂದ ಲಕ್ಷಾಂತರ ಜನರ ಹೃದಯವನ್ನು ಗೆದ್ದಿದ್ದಾರೆ”. ಎಂದು ಸಂಸ್ಥೆ ಸಂದೇಶ ಬರೆದುಕೊಂಡಿದೆ. ಇದನ್ನೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top