fbpx
ಸಮಾಚಾರ

ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಇರುವ ಬ್ಯಾಗನ್ನು ಪೊಲೀಸ್ ಠಾಣೆಗೆ ನೀಡಿ ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ!

ನಾವು ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಾದಾಗ ನಮ್ಮ ಕಣ್ಣಿಗೆ ರಸ್ತೆಯಲ್ಲಿ 10 ರೂಪಾಯಿ, ಅಥವಾ 100 ರೂಪಾಯಿ ಕಣ್ಣಿಗೆ ಕಂಸಿಕೊಂಡರೆ ಅದನ್ನು ನಮ್ಮ ಜೇಬಿಗೆ ಹಾಕಿಕೊಳ್ಳುತ್ತೇವೆ. ಅದರಲ್ಲೂ ಲಕ್ಷ ರೂಪಾಯಿ ಸಿಕ್ಕರೆ ಮುಗಿತು ಕಥೆ ಯಾರಿಗೂ ಕಾಣದಂತೆ ಅದನ್ನು ಎತ್ತಿಕೊಂಡು ಓಡಿಹಿಗುತ್ತೇವೆ. ಆದರೆ ಇಲ್ಲೊಬ್ಬ ಪೊಲೀಸ್ ಅಧಿಕಾರಿ ರಸ್ತೆಯಲ್ಲಿ ಸಿಕ್ಕ ಲಕ್ಷ ರೂಪಾಯಿವುಳ್ಳ ಬ್ಯಾಗನ್ನು ಪೊಲೀಸರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಈ ಘಟನೆ ನಡೆದಿರೋದು ಛತ್ತೀಸ್​ಗಢ ದಲ್ಲಿ. ಛತೀಸ್ ಗಡದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ರಸ್ತೆಯಲ್ಲಿ ನಡೆದುಕೊಂಡ ಹೋಗುತ್ತಿದ್ದಾ 45 ಲಕ್ಷ ರೂಪಾಯಿ ಉಳ್ಳ ಬ್ಯಾಗ್ ಸಿಕ್ಕಿದೆ. ಇಷ್ಟು ಹಣವನ್ನು ಅವರು ತಮ್ಮ ಸ್ವಾರ್ಥಕ್ಕಾಗಿ ಬಳಸದೆ ಬ್ಯಾಗನ್ನು ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇವರ ಪ್ರಾಮಾಣಿಕತೆಗೆ ಜನರು ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಖನಂದನ್ ರಾಥೋರ್ ಮಾತನಾಡಿ, ನವ ರಾಯ್‌ಪುರದ ಕಯಾಬಂಧ ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಕಾನ್‌ಸ್ಟೆಬಲ್ ನಿಲಂಬರ್ ಸಿನ್ಹಾ ಅವರು ಬೆಳಿಗ್ಗೆ ಮಾನಾ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಯೊಂದರಲ್ಲಿ ಬ್ಯಾಗ್ ಅನ್ನು ಕಂಡುಕೊಂಡಿದ್ದಾರೆ. ಬ್ಯಾಗ್ ಪರಿಶೀಲಿಸಿದಾಗ ಅದರೊಳಗೆ 2000 ಮತ್ತು 500 ರೂ. ನೋಟುಗಳ ಕಂತೆ ಕಂಡುಬಂದಿದೆ. ಈ ಬ್ಯಾಗ್​ನಲ್ಲಿ ಒಟ್ಟು 45 ಲಕ್ಷ ರೂಪಾಯಿ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಿವಿಲ್ ಲೈನ್ಸ್ ಠಾಣೆಗೆ ಬ್ಯಾಗ್ ಅನ್ನು ಹಸ್ತಾಂತರಿಸಿದ್ದಾರೆ ಎಂದು ತಿಳಿಸಿದರು. ಈ ಬ್ಯಾಗ್ ಯಾರಿಗೆ ಸೇರಲಿದ್ದು ಎಂಬುದರ ಕುರಿತು ತನಿಖೆ ನಡೆಸಿ ಅವರಿಗೆ ಹಣ ತಲುಪಿಸುವುದಾಗಿ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top