fbpx
ಸಮಾಚಾರ

ಕಾಮನ್ ವೆಲ್ತ್ ಗೇಮ್ ಶುರುವಾಗುವ ಮುನ್ನ ಭಾರತ ತಂಡಕ್ಕೆ ದೊಡ್ಡ ಆಘಾತ! ನೀರಜ್ ಚೋಪ್ರಾ ಔಟ್

ಜುಲೈ 28 ರಿಂದ ಶುರುವಾಗಲಿರುವ ಕಾಮನ್ ವೆಲ್ತ್ ಗೇಮ್ಸ್ ಗೆ ಭಾರತ ತಂಡಕ್ಕೆ ದೊಡ್ಡ ಆಘಾತ. ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದು ಚಾರಿತ್ರಿಕ ಸಾಧನೆ ಮಾಡಿದ್ದ ನೀರಜ್ ಚೋಪ್ರಾ ಈ ಬಾರಿಯ ಕಾಮನ್ ವೆಲ್ತ್ ಗೇಮ್ ನಲ್ಲಿ ಭಾಗವಹಿಸುತ್ತಿಲ್ಲ.

ಕೆಲ ದಿನಗಳ ಹಿಂದೆ ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ವೇಳೆಯಲ್ಲಿ ನೀರಜ್ ಚೋಪ್ರಾ ಗಾಯಗೊಂಡಿದ್ದು ತೊಡೆ ಸಂದಿನ ನೋವನ್ನು ಎದುರಿಸುತ್ತಿದ್ದರು. ಹೀಗಾಗಿ ಕಾಮನ್​ವೆಲ್ತ್ ಗೇಮ್ಸ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅಚ್ಚರಿ ಏನೆಂದರೆ ಗಾಯಗೊಂಡಿದ್ದರು ಸಹ ಇವರು ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು.

ವಿಶ್ವ ಅಥ್ಲೆಟಿಕ್ಸ್​ನಲ್ಲಿ 88.13 ಮೀಟರ್ ಎಸೆಯುವ ವೇಳೆ ಕಾಲಿಗೆ ಗಾಯ ಮಾಡಿಕೊಂಡಿದ್ದು, ಹೀಗಾಗಿ ಮುಂಬರುವ ಕಾಮನ್​ವೆಲ್ತ್​ ಕ್ರೀಡಾಕೂಟದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ 100% ಫಿಟ್ನೆಸ್‌ ಇಲ್ಲದೇ ಇರುವುದರಿಂದಾಗಿ ಕಾಮನ್‌ವೆಲ್ತ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ಕಾರ್ಯದರ್ಶಿ ರಾಜೀವ್ ಮೆಹ್ತಾ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top