fbpx
ಸಮಾಚಾರ

ತೆಲುಗು ಸಿನಿಮಾದ ದಿಗ್ಗಜ ಎನ್‌ಟಿಆರ್ ಮಗಳು ಉಮಾ ಮಹೇಶ್ವರಿ ನಿಧನ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗು ತೆಲುಗು ಸಿನಿಮಾ ರಂಗದ ಸ್ಟಾರ್ ನಟ ಎನ್‌ಟಿ ರಾಮರಾವ್ (ಎನ್ ಟಿ ಆರ್) ಅವರ ಪುತ್ರಿ ಕಾಂತಮನೇನಿ ಉಮಾ ಮಹೇಶ್ವರಿ (52) ಸೋಮವಾರ (Aug 1) ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆಯ ಕುರಿತು ಜುಬ್ಲಿ ಹಿಲ್ಸ್ ಪೊಲೀಸರಿಗೆ ಮಧ್ಯಾಹ್ನ 2.35ರ ಸುಮಾರಿಗೆ ಮಾಹಿತಿ ಲಭಿಸಿದೆ.

ಎನ್ ಟಿ ಆರ್ ಅವರ ಪುತ್ರಿ ಉಮಾ ಮಹೇಶ್ವರಿ ಕೆಲವು ತಿಂಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಸೋಮವಾರ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಮಾ ಮಹೇಶ್ವರಿ ಅವರಿಗೆ ದೀಕ್ಷಿತ ಎಂಬ ಮಗಳಿದ್ದಾರೆ. ಮಗಳ ಪ್ರಕಾರ ಊಟದ ಸಮಯದಲ್ಲಿ ತಮ್ಮ ತಾಯಿ ತಮ್ಮ ಕೋಣೆಗೆ ಹೋದವರು ಎಷ್ಟು ಹೊತ್ತಾದರೂ ಹೊರಗೆ ಬಂದಿರಲಿಲ್ಲ. ಗಾಬರಿಗೊಂಡ ಮಗಳು ತಕ್ಷಣ ಪೊಲೀಸರಿಗೆ ಮಾಹಿತಿಯನ್ನು ತಿಳಿಸಿದರು. ಸುಮಾರು 2:30ಕ್ಕೆ ಸ್ಥಳಕ್ಕೆ ಆಗಮಿಸಿದ ಜುಬ್ಲಿ ಹಿಲ್ಸ್ ಪೊಲೀಸರು ರೂಮ್ ಒಳಗೆ ಪ್ರವೇಶಿಸಿದಾಗ ಅಲ್ಲಿ ಉಮಾ ಕೋಣೆಯಲ್ಲಿದ್ದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದೀಗ ಉಮಾ ಅವರ ಸಾವಿಗೆ ರಾಜಕೀಯ ಗಣ್ಯರು, ಚಿತ್ರರಂಗದ ಕಲಾವಿದರು, ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ. ಎನ್ ಟಿ ಆರ್ ಅವರ ಮಕ್ಕಳಲ್ಲಿ ಉಮಾ ಕೊನೆಯ ಮಗಳಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top