ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸದ್ಯ ಕ್ರಾಂತಿ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಸಾಮಾನ್ಯವಾಗಿ ಒಂದು ಸಿನಿಮಾ ಮುಗಿಯೋವರೆಗೂ ಮತ್ತೊಂದು ಸಿನಿಮಾದ ಕೆಲಸಗಳಲ್ಲಿ ದರ್ಶನ್ ಅವರು ಭಾಗಿಯಾಗೋಲ್ಲ. ಆದರೆ ಕ್ರಾಂತಿ ನಂತರ ದರ್ಶನ್ ನಟಿಸಲಿರುವ ಚಿತ್ರಕ್ಕೆ ಇಂದು ಚಾಲನೆ ಸಿಕ್ಕಿದೆ.
ಈನ್ನೂ ಶೀರ್ಷಿಕೆ ಘೋಷಣೆಯಾಗಿರದ ಈ ಚಿತ್ರಕ್ಕೆ ಸದ್ಯ #D56 ಎಂದು ಕರೆಯಲಾಗುತ್ತಿದ್ದು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಇಂದು ಮುಹೂರ್ತ ನೆರವೇರಿದೆ. ಆರ್ಟ್ ಆಫ್ ಲಿವಿಂಗ್ ನ ರವಿಶಂಕರ ಗುರೂಜಿಯವರು ಚಿತ್ರದ ಮುಹೂರ್ತಕ್ಕೆ ಚಾಲನೆ ನೀಡಿದರು. ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮತ್ತು ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾದ ನಾಯಕಿ ಹೆಸರನ್ನು ಚಿತ್ರತಂಡ ಘೋಷಣೆ ಮಾಡಿದೆ.
ನನ್ನ ಮುದ್ದಿನ ಮಗಳು ಇಂದು ನನಗೆ ಅಪಾರ ಪ್ರೀತಿ ಹಾಗೂ ಬದುಕು ನೀಡಿದ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ… ನನಗೆ ನೀಡಿದ ಪ್ರೀತಿ ಮತ್ತು ಆಶೀರ್ವಾದ ಅವಳ ಮೇಲೂ ಇರಲಿ ಎಂದು ಆಶಿಸುತ್ತೇನೆ 🙏🙏 pic.twitter.com/7lf3V33AyN
— Malashree Ramu (@RamuMalashree) August 5, 2022
ಮಾಲಾಶ್ರೀ ಮಗಳು ಚಿತ್ರರಂಗಕ್ಕೆ ಪಾದಾರ್ಪಣೆ:
ವಿಶೇಷ ಎಂದರೆ ಕನ್ನಡ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಎಂದೇ ಪ್ರಖ್ಯಾತಿ ಆಗಿರುವ ಕನಸಿನ ರಾಣಿ ಮಾಲಾಶ್ರೀಯವರ ಮಗಳು ಅನನ್ಯ ರಾಮ್ ಈ ಚಿತ್ರದ ಮೂಲಕ ನಾಯಕಿಯಾಗಿ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ. ತಾರಾ ದಂಪತಿ ಕೋಟಿ ನಿರ್ಮಾಪಕ ರಾಮು ಮತ್ತು ಮಾಲಾಶ್ರೀಯವರ ಮಗಳು ದರ್ಶನ್ ಅವರಿಗೆ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಡುತ್ತಿರುವುದು ವಿಶೇಷ. ಈ ಚಿತ್ರದ ಮೂಲಕ ಅನನ್ಯ ಅವರ ಹೆಸರು ರಾಧನಾ ರಾಮ್ ಎಂದು ಜನರಿಗೆ ಪರಿಚಯವಾಗಲಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
