fbpx
ಸಮಾಚಾರ

ಕನ್ನಡರಾಜ್ಯೋತ್ಸವಕ್ಕೆ ಅಪ್ಪು ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ!

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ತಿಂಗಳುಗಳೇ ಕಳೆದರು ಅವರ ನೆನಪು ಮಾತ್ರ ಸದಾ ಅಭಿಮಾನಿಗಳ ಮನಸಲ್ಲಿ ಅಚ್ಚೆಯಾಗಿ ಉಳಿದಿದೆ. ಅಪ್ಪು ನಿಧನದ ನಂತರ ಕರ್ನಾಟಕ ಸರ್ಕಾರ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿತ್ತು. ಆದರೆ ಈ ಪ್ರಶಸ್ತಿಯನ್ನು ನೀಡುವ ಶುಭ ಗಳಿಗೆ ಬಂದಿರಲಿಲ್ಲ. ಆದರೆ ಇದೀಗ ಈ ಶುಭ ಗಳಿಗೆಯ ದಿನಾಂಕ ಪ್ರಕಟವಾಗಿದೆ.

ಕರ್ನಾಟಕ ಸರ್ಕಾರ ಅಪ್ಪು ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸುವುದಾಗಿ ಹೇಳಿತ್ತು. ಆದರೆ ಅದು ಎಂದು ಅಂತ ಮಾತ್ರ ಸರ್ಕಾರ ತಿಳಿಸಿರಲಿಲ್ಲ. ಆದರೆ ಇದೀಗ ಸರ್ಕಾರ ಇದರ ದಿನಾಂಕವನ್ನು ಘೋಷಿಸಿದ್ದು, ಕರ್ನಾಟಕ ರಾಜ್ಯೋತ್ಸವ (ನವೆಂಬರ್ 1) ದಿನದಂದು ಅಪ್ಪು ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಅಪ್ಪುಗೆ ಘೋಷಣೆ ಮಾಡಿರುವ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು. ಈ ವೇಳೆ ಅಪ್ಪು ಪರಿವಾರದವರು ಸಹ ಹಾಜರಾಗಿದ್ದರು.

ಈ ಬಾರಿಯ ಫಲ ಪುಷ್ಪ ಪ್ರದರ್ಶನ ಅಣ್ಣಾವ್ರು ಮತ್ತು ಅಪ್ಪು ಅವರ ನೆನಪಿಗಾಗಿ ಆಯೋಜಿಸಲಾಗಿದೆ. ಇಂದಿನಿಂದ ಹತ್ತು ದಿನಗಳ ಕಾಲ ನಡೆಯುವ ಈ ಪ್ರದರ್ಶನದಲ್ಲಿ ಜನರು ಭಾಗವಹಿಸಿ ಈ ಸುಂದರ ಕ್ಷಣಗಳನ್ನು ಅನುಭವಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top