fbpx
ಸಮಾಚಾರ

ಯುಪಿಐ ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ದೇಶದಲ್ಲಿ ಅತಿ ಹೆಚ್ಚು ಜನಪ್ರಿಯವಾಗಿರುವ ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ) ಪಾವತಿಗಳಿಗೆ ಶುಲ್ಕ ವಿಧಿಸಲು ಕೇಂದ್ರ ಸರ್ಕಾರದ ಬಳಿ RBI ಪ್ರಸ್ತಾಪಿಸಿದೆ ಎಂಬ ಸುದ್ದಿ ಎಲ್ಲೆಡೆ ವೈರಲ್ ಆಗಿತ್ತು. ಈ ಸುದ್ದಿ ಕೇಳಿ UPI ಗ್ರಾಹಕರು ಆಕ್ರೋಶ ಹೊರಹಾಕಿದ್ದರು. ಈ ಸುದ್ದಿಗಳ ನಡುವೆಯೇ ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ ಯುಪಿಐ ಪಾವತಿ ಸೇವೆಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಹೇಳಿದೆ.

 

 

ಕೇಂದ್ರ ಹಣಕಾಸು ಇಲಾಖೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದೆ. ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯು ಸಾರ್ವಜನಿಕರಿಗೆ ಅಪಾರ ಅನುಕೂಲ ಹಾಗೂ ಉತ್ಪಾದಕತೆ ಲಾಭವ ತಂದು ಕೊಡುತ್ತಿದೆ. ಯುಪಿಐ ಪಾವತಿಗಳಿಗೆ ಶುಲ್ಕ ವಿಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ತಿಳಿಸಿದೆ.

‘ಡಿಜಿಟಲ್ ಸೇವೆಗಳನ್ನು ಒದದಿಸುವ ಸೇವಾದಾತರಿಗೆ ತುಸು ಖರ್ಚು ಬರುವುದು ನಿಜ. ಈ ಖರ್ಚು ಭರಿಸಲು ಪರ್ಯಾಯ ಮಾರ್ಗಗಳನ್ನು ಹುಡುಕಬೇಕಿದೆ. ಒಟ್ಟಾರೆಯಾಗಿ ಡಿಜಿಟಲ್ ವಹಿವಾಟು ಹೆಚ್ಚಾಗುವುದು ಸಮಾಜ ಹಾಗೂ ಉತ್ಪಾದಕತೆಗೆ ಹಲವು ರೀತಿಯಲ್ಲಿ ಅನುಕೂಲವಾಗಿದೆ. ಡಿಜಿಟಲ್ ಪಾವತಿಗಳಿಗೆ ಪೂರಕ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರವು ಕಳೆದ ವರ್ಷ ಹಲವು ನೆರವು ನೀಡಿತ್ತು. ಆ ನೆರವನ್ನು ಈ ವರ್ಷವೂ ಮುಂದುವರಿಸಲಿದೆ’ ಎಂದು ಹಣಕಾಸು ಇಲಾಖೆ ಹೇಳಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top