ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಮೈಸೂರಿನ ನಜರಾಬಾದ್ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಶುಕ್ರವಾರ ಈ ದೂರು ದಾಖಲಾಗಿದೆ.
ಇಬ್ಬರು ಅಪ್ರಾಪ್ತೆಯರ ಮೇಲೆ ಕಳೆದ ಮೂರೂವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶ್ರೀಗಳು ಸೇರಿದಂತೆ, ಐದು ಮಂದಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಕೇಸ್ ದಾಖಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಮಠದ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹಾಸ್ಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ವಿದ್ಯಾರ್ಥಿನಿಯರನ್ನು ಅಲ್ಲಿನ ವಾರ್ಡನ್ ಸ್ವಾಮೀಜಿ ಬಳಿ ಹಣ್ಣು ತೆಗೆದುಕೊಂಡು ಹೋಗುವಂತೆ ಒತ್ತಾಯ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರಿಗೆ ಮತ್ತು ಬರುವಂತೆ ಮಾಡಿ ಸ್ವಾಮೀಜಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು. ಈ ದೌರ್ಜನ್ಯದ ಬಗ್ಗೆ ಯಾರಿಗಾದ್ರೂ ಹೇಳಿದ್ರೆ ಕೊಲೆ ಮಾಡುವ ಬೆದರಿಕೆ ಸಹ ಹಾಕುತ್ತಾರೆ. ಕೆಲ ವಿದ್ಯಾರ್ಥಿನಿಯರು ಅನಾರೋಗ್ಯದ ನೆಪ ಹೇಳಿ ಸ್ವಾಮೀಜಿಗಳ ದೌರ್ಜನ್ಯದಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ವಿದ್ಯಾರ್ಥಿನಿಯರು ಮಾಹಿತಿ ನೀಡಿದ್ದಾರೆ.
ಅಲ್ಲದೆ ಇಂಥ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ಸಹ ದೂರು ನೀಡಲು ಹೆದರುತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದೇವೆ ಎಂದು ವಿದ್ಯಾರ್ಥಿನೀಯರು ಹೇಳಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
