fbpx
ಸಮಾಚಾರ

ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ನಿಧನ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಶುಕ್ರವಾರ (26 ಆಗಸ್ಟ್) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ರಾಮೇಗೌಡ (70) ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾದರು. ಇವರ ಅಂತ್ಯಕ್ರಿಯೆಯನ್ನು ಇವರ ಸ್ವಗ್ರಾಮವಾಗಿರುವ ಸಿದ್ದರಾಮನಹುಂಡಿಯಲ್ಲಿ ಇಂದು ನಡೆಯಲಿದ್ದು, ತಮ್ಮ ಸಹೋದರನ ಅಂತಿಮ ದರ್ಶನವನ್ನು ಸಿದ್ದರಾಮಯ್ಯ ಪಡೆಯಲಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

 

 

ರಾಮೇಗೌಡ ಅವರು ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ, ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಸಹೋದರರನ್ನು ಅಗಲಿದ್ದಾರೆ. ರಾಮೇಗೌಡ ಅವರ ಸಾವಿನ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top