fbpx
ಸಮಾಚಾರ

ಜಗ್ಗೇಶ್ ಮನೆಗೆ ನುಗ್ಗಿದ ಮಳೆ ನೀರು: ಅಳಲು ತೋಡಿಕೊಂಡ BJP ರಾಜ್ಯಸಭೆ ಸದಸ್ಯ

ಸತತವಾಗಿ ಅಬ್ಬರಿಸುತ್ತಿರುವ ಮಳೆರಾಯ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಸೃಷ್ಟಿಸಿ ಮರಣ ಮೃದಂಗ ಬಾರಿಸುತ್ತಿದ್ದಾನೆ. ರಾಜ್ಯದ ವಿವಿದೆಡೆ ಧಾರಾಕಾರ ಮಳೆ ಮುಂದುವರಿದಿದ್ದು ಮಹಾಮಳೆಗೆ ಇಡೀ ಜನರ ಜೀವನ ಅಕ್ಷರಶಃ ಕೊಚ್ಚಿಹೋಗಿದೆ.. ಈಗ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್‌ ಅವರ ಮನೆಗೂ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

 

 

ಜಗ್ಗೇಶ್‌ ಅವರ ತವರೂರು ತುಮಕೂರು ಜಿಲ್ಲೆಯ ಮಾಯಸಂದ್ರದಲ್ಲಿ ಭಾರಿ ಮಳೆಯಾಗಿದ್ದು ಇಲ್ಲಿರುವ ಅವರ ಮನೆಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಹಾಗೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಗಮನ ಹರಿಸುವಂತೆ ಅವರು ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್‌ ಅವರು, ‘ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತ.. ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆ ಕಟ್ಟಿ ನೀರು ಹರಿಯುವ ಹೊಂಡಗಳ ಮುಚ್ಚಿದ್ದಾರೆ. ಮಾಯಸಂದ್ರ ತಳದಲ್ಲಿ ಇರುವ ಸುಮಾರು 20 ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತದೆ. ದಯಮಾಡಿ ನೀರಾವರಿ ನಿಗಮ ಗಮನ ಹರಿಸಲು ವಿನಂತಿ..’ ಎಂದು ಮನವಿ ಮಾಡಿಕೊಂಡಿದ್ದಾರೆ. ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಟ್ಯಾಗ್ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top