fbpx
ಸಮಾಚಾರ

ಭಾರತ ತಂಡಕ್ಕೆ ದೊಡ್ಡ ಆಘಾತ! ಭಾರತದ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಸುರೇಶ್ ರೈನಾ

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ತನ್ನ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ನೀಡಿದ್ದಾರೆ. ಹಲವಾರು ವರ್ಷಗಳ ಕಾಲ ಕ್ರಿಕೆಟ್ ಜೀವನದಲ್ಲಿ ತೊಡಗಿಸಿಕೊಂಡಿದ್ದ ಇವರು ಇದೀಗ ದಿಡೀರನೆ ತಮ್ಮ ಕ್ರಿಕೆಟ್ ವೃತಿ ಬದುಕಿಗೆ ವಿದಾಯ ತಿಳಿಸಿದ್ದಾರೆ.

ಮಿಸ್ಟರ್ ಐಪಿಎಲ್ ಎಂದೇ ಪ್ರಖ್ಯಾತಿ ಗಳಿಸಿದ್ದ ಇವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ” ”ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ. ನಾನು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಗೆ ನಿವೃತ್ತಿ ಘೋಷಿಸಲು ಬಯಸುತ್ತೇನೆ. ಬಿಸಿಸಿಐ (BCCI), ಯುಪಿ ಕ್ರಿಕೆಟ್, ಸಿಎಸ್​ಕೆ, ರಾಜೀವ್ ಶುಕ್ಲಾ ಹಾಗೂ ನನಗೆ ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ, ಸ್ನೇಹಿತರಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ,” ಎಂದು ತಿಳಿಸಿದ್ದಾರೆ. ಈ ಮೂಲಕ ತಾವು ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತಿ ಹೊಂದಿರುವುದಾಗಿ ಸ್ಪಷ್ಟವಾಗಿ ತಿಳಿಸಿದ್ದಾರೆ.

 

 

ಈ ಹಿಂದೆ ಅಂದರೆ 2020 ಆಗಸ್ಟ್‌ 15 ರಂದು ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದರು. ಇದಾದ ನಂತರ ಸಿಎಸ್ ಕೆ ಪರ ಐಪಿಎಲ್ ನಲ್ಲಿ ಕಣಕ್ಕಿಳಿದು ಭರ್ಜರಿ ಪ್ರದರ್ಶನ ತೋರಿದರು. ಆದರೆ ಈ ಬಾರಿಯ ಐಪಿಎಲ್ ಬಿಡ್ಡಿಂಗ್ ನಲ್ಲಿ ಯಾವ ತಂಡವು ಸಹ ಇವರನ್ನು ಸೇರಿಸಿಕೊಂಡಿರಲಿಲ್ಲ. ಇದು ಇವರ ಮನಸಿಗೆ ಬಹಳಷ್ಟು ಬೇಸರವನ್ನು ತಂದಿತ್ತು. ಇದೆ ಕರ್ಣಾಕ್ಕಾಗಿ ಇವರು ನಿವೃತಿ ಘೋಷಿಸಿರಬಹುದು ಎಂದು ಹೇಳಲಾಗುತ್ತಿದೆ.

ಸುಮಾರು 13 ವರ್ಷಗಳ ಕಾಲ ಅಂತರರಾಷ್ಟ್ರೀಯ ಪಂದ್ಯಗಳನ್ನ ಆಡಿರುವ ಸುರೇಶ್ ರೈನಾ, 18 ಟೆಸ್ಟ್​, 226 ಏಕದಿನ ಪಂದ್ಯ ಹಾಗೂ 78 ಟಿ20 ಪಂದ್ಯಗಳನ್ನ ಆಡಿದ್ದಾರೆ. ಇದಲ್ಲದೆ ಐಪಿಎಲ್ ಇತಿಹಾಸದಲ್ಲಿ ಘರಿಷ್ಟ ರನ್ ಬಾರಿಸಿರುವ ಪಟ್ಟಿಯಲ್ಲಿ ಸಹ ರೈನಾ ಅವರ ಹೆಸರಿದೆ.

ಕೇವಲ ಭಾರತಕ್ಕೆ ಸಂಭಂದಿಸಿದ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತಿ ಘೋಷಿಸಿರುವ ರೈನಾ ವಿದೇಶದ ಟಿ20 ಲೀಗ್‌ಗಳಲ್ಲಿ ಆಡಲು ಅರ್ಹರಾಗಿದ್ದಾರೆ. ಹೀಗಾಗಿ ವಿದೇಶಿ ಲೀಗ್ ಗಳಲ್ಲಿ ಮತ್ತೆ ತಮ್ಮ ಬ್ಯಾಟನ್ನು ಬಿಸುತ್ತಾರಾ ಎಂದು ಕಾದು ನೋಡಬೇಕು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top