fbpx
ಸಮಾಚಾರ

ಅಪ್ಪು ಅಭಿಮಾನಿಗಳಿಗೆ ಗುಡ್‍ನ್ಯೂಸ್! ಅಪ್ಪು ಜನ್ಮದಿನವನ್ನು ಇನ್ಮೇಲೆ ಸ್ಪೂರ್ತಿ ದಿನವಾಗಿ ಆಚರಿಸಲು ಘೋಷಿಸಿದ ರಾಜ್ಯ ಸರ್ಕಾರ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನ್ನು ದೈಹಿಕವಾಗಿ ಅಗಲಿದರು ಸಹ ಮಾನಸಿಕವಾಗಿ ಅಭಿಮಾನಿಗಳ ಮನಸಲ್ಲಿ ಸದಾ ಇರುತ್ತಾರೆ. ಇಂದಿಗೂ ಸಹ ಅಭಿಮಾನಿಗಳು ಇವರನ್ನು ದೇವರ ರೂಪದಲ್ಲಿ ಪೂಜಿಸುತ್ತಿದ್ದಾರೆ. ಹೀಗಾಗಿ ಅಪ್ಪು ಅಂಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್‍ನ್ಯೂಸ್ ನೀಡಿದ್ದು, ಇದರಿಂದ ಅಪ್ಪು ಅಭಿಮಾನಿಗಳು ಸಕತ್ ಖುಷಿಯಾಗಿದ್ದಾರೆ.

ರಾಜ್ಯ ಸರ್ಕಾರ ಇನ್ಮುಂದೆ ಅಪ್ಪು ಹುಟ್ಟುಹಬ್ಬವನ್ನು (ಮಾರ್ಚ್ 17) ಸ್ಫೂರ್ತಿ ದಿನ (Inspiration Day)
ಎಂದು ಆಚರಿಸಲಾಗುವುದು ಎಂದು ಘೋಷಿಸಿದ್ದಾರೆ. ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರತಿ ವರ್ಷ ಮಾರ್ಚ್ 17 ರಂದು ರಾಜ್ಯ ಸರ್ಕಾರದ ವತಿಯಿಂದಲೇ ಸ್ಫೂರ್ತಿ ದಿನ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.

 

 

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುನಿಲ್ ಕುಮಾರ್ ” ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಧನ್ಯವಾದಗಳು. ಅಪ್ಪು ಜನ್ಮದಿನ, ಮಾರ್ಚ್ 17 ಇನ್ನು ಮುಂದೆ ಸ್ಪೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ ” ಎಂದು ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top