ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 2022ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಒಟ್ಟು 3484 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಕ್ಟೋಬರ್ 31, 2022ರೊಳಗೆ ಸಲ್ಲಿಸಬಹುದು.
ಶಿಕ್ಷಣ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ ಪಿಯುಸಿ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ ಎಷ್ಟು?
-ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.250.
-ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.100.
ವಯೋಮಿತಿ ಅರ್ಹತೆಗಳು
ಕನಿಷ್ಠ 18 ವರ್ಷ ವಯಸ್ಸಾಗಿರಬೇಕು, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ
ದೈಹಿಕ ಪ್ರಮಾಣಿತ ಪರೀಕ್ಷೆ
ದೈಹಿಕ ಸಹಿಷ್ಣುತೆ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19ನೇ ಸೆಪ್ಟೆಂಬರ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 03 ನವೆಂಬರ್ 2022
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ www.recruitment.ksp.gov.in ನಲ್ಲಿ ನೀಡಲಾಗಿರುವ ಸೂಚನೆಯನ್ನು ಓದಿಕೊಂಡು ಯಾವುದೇ ತಪ್ಪು ಮಾಹಿತಿ ನೀಡದೇ ಅರ್ಜಿಯನ್ನು ಭರ್ತಿ ಮಾಡಬೇಕು.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
