fbpx
ಸಮಾಚಾರ

ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ಉದ್ಯೋಗಾವಕಾಶ: ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ

ಭಾರತೀಯ ರಿಸರ್ವ್​ ಬ್ಯಾಂಕ್​ನ ನೋಟು ಮುದ್ರಣ ಪ್ರೈವೇಟ್​ ಲಿಮಿಟೆಡ್​ನ ಮೈಸೂರು ಘಟಕದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟಂಟ್​ ಮ್ಯಾನೇಜರ್​, ಡೆಪ್ಯೂಟಿ ಮ್ಯಾನೇಜರ್​ ಸೇರಿದಂತೆ ಒಟ್ಟು 17 ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:
ಭಾರತೀಯ ರಿಸರ್ವ್​ ಬ್ಯಾಂಕ್​ನ ನೋಟು ಮುದ್ರಣ ಪ್ರೈವೇಟ್​ ಲಿಮಿಟೆಡ್​ನ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.

ಆಯ್ಕೆ ವಿಧಾನ:
ಭಾರತೀಯ ರಿಸರ್ವ್​ ಬ್ಯಾಂಕ್​ನ ನೋಟು ಮುದ್ರಣ ಪ್ರೈವೇಟ್​ ಲಿಮಿಟೆಡ್​ನ ನೇಮಕಾತಿ ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಸೆಪ್ಟೆಂಬರ್​​ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08 ಅಕ್ಟೋಬರ್ 2022

ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆ: ಆಫ್​ಲೈನ್

ಅರ್ಜಿ ಸಲ್ಲಿಸುವ ವಿಳಾಸ
ಸಿಎಫ್​ಒ ಮತ್ತು ಸಿಎಸ್​ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಾಣ ಪ್ರೈವೇಟ್ ಲಿಮಿಟೆಡ್, ನಂ.3 ಮತ್ತು 4, ಒಂದನೇ ಹಂತ, ಬಿಟಿಎಂ ಲೇಔಟ್, ಬನ್ನೇರುಘಟ್ಟ ರಸ್ತೆ, ಅಂಚೆ ಪೆಟ್ಟಿಗೆ ಸಂಖ್ಯೆ 2924, ಡಿ.ಆರ್. ಕಾಲೇಜು P. O., ಬೆಂಗಳೂರು – 560029.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top