fbpx
ಸಮಾಚಾರ

ಚಿಕ್ಕವರಿಂದ ಬಾಳಿ ಬದುಕಿದ್ದ ಮನೆಯನ್ನು ತೊರೆದ ಕ್ರೇಜಿ ಸ್ಟಾರ್ ರವಿಚಂದ್ರನ್! ಕಾರಣವೇನು ಗೊತ್ತಾ?

ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ತಮ್ಮ ಮಗನ ಮದುವೆ ನಂತರ ತಾವು ವಾಸವಾಗಿದ್ದ ಮನೆಯನ್ನು ಕಾಳಿಮಾಡಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಆದರೆ ಇದೀಗ ಈ ಕುರಿತು ಸ್ವತಃ ರವಿಚಂದ್ರನ್ ಅವರು ಸ್ಪಷ್ಟನೆ ನೀಡಿದ್ದಾರೆ.

ರಾಜಾಜಿನಗರದ ಡಾ. ರಾಜ್ ಕುಮಾರ್ ರಸ್ತೆ ಎಂದಾಕ್ಷಣ ನಮಗೆ ನೆನಪು ಬರೋದು ರವಿಚಂದ್ರನ್ ಅವರ ನಿವಾಸ. ಕಳೆದ ಹಲವಾರು ವರ್ಷಗಳಿಂದ ರವಿಚಂದ್ರನ್ ಅವರು ಈ ಮನೆಯಲ್ಲಿ ವಾಸವಾಗಿದ್ದರು. ಆದರೆ ಇದೀಗ ದಿಡೀರನೆ ರವಿಚಂದ್ರನ್ ಈ ಮನೆಯನ್ನು ಕಾಲಿ ಮಾಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಗಾಂಧಿನಗರದ ಸುತ್ತಾ ಹಲವಾರು ವಿಷಯಗಳು ಓಡಾಡುತ್ತಿವೆ.

ರವಿಚಂದ್ರನ್ ತಮ್ಮ ಹಳೆಯ ಮನೆಯಲ್ಲಿ ಇಲ್ಲ ಎಂಬ ವಿಷಯ ತಿಳಿಯುತ್ತಿದಂತೆ ಕೆಲವರು ಆ ಮನೆಯನ್ನು ಮಾರಿದರು ಎಂದು ಹೇಳಿದರೆ, ಇನ್ನೂ ಕೆಲವರು ವಾಸ್ತು ಕಾರಣಕ್ಕಾಗಿ ಬಿಟ್ಟಿದ್ದಾರೆ ಎಂದೂ ಮಾತನಾಡಿಕೊಳ್ಳುತ್ತಿದ್ದರು. ರಿಪೇರಿ ಕಾರಣಕ್ಕಾಗಿ ಬೇರೆ ಮನೆಗೆ ಶಿಫ್ಟ್ ಆಗಿದ್ದಾರೆ ಎಂದೂ ಹೇಳಲಾಗಿತ್ತು. ಆದರೆ ಇದೀಗ ಇವೆಲ್ಲ ಉಹಾ ಪೋಹಗಳಿಗೆ ಸ್ವತಃ ರವಿಚಂದ್ರನ್ ಅವರೇ ಬನಾರಸ್ ಸಿನಿಮಾದ ಟೀಸರ್ ಬಿಡುಗಡೆಗೂ ಮುನ್ನ ತಿಳಿಸಿದ್ದಾರೆ.

ನಾನು ಮನೆಯನ್ನು ಸಂಪೂರ್ಣವಾಗಿ ತೊರೆದಿಲ್ಲ. ಆದರೆ, ಹೊಸ ಮನೆಗೆ ಶಿಫ್ಟ್ ಆಗಿದ್ದು ನಿಜ. ಮಗನ ಮದುವೆಯ ನಂತರ ಹೊಸ ಮನೆಗೆ ಹೋಗುವುದು ಎಂದು ಮೊದಲೇ ನಿರ್ಧಾರವಾಗಿತ್ತು. ಹಾಗಾಗಿ ಹೊಸ ಮನೆಗೆ ಹೋಗಿದ್ದೇವೆ. ಹಳೆ ಮನೆಯಲ್ಲೂ ನಾನು ಇರುತ್ತೇನೆ. ಸಿನಿಮಾ ಸಂಬಂಧಿ ಕೆಲಸಗಳನ್ನು ಇಲ್ಲಿಯೇ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಇದೀಗ ರವಿಚಂದ್ರನ್ ಅವರು ಹೊಸಕೆರೆ ಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದಾರೆ.

ಹೊಸ ಮನೆಗೆ ಶಿಫ್ಟ್ ಆಗಬೇಕು ಎನ್ನುವುದು ಹಲವು ವರ್ಷಗಳಿಂದ ನಡೆಯುತ್ತಲೇ ಇತ್ತು. ಅಮ್ಮನಿಗಾಗಿ ಹಳೆ ಮನೆಯಲ್ಲೇ ಇದ್ದೆವು. ಮನೋರಂಜನ್ ಮದುವೆ ನಂತರ ಹೋಗುವ ಕುರಿತು ಪ್ಲ್ಯಾನ್ ಮಾಡಲಾಗಿತ್ತು. ಅದರಂತೆಯೇ ಇದೀಗ ಹೊಸ ಮನೆಗೆ ಶಿಫ್ಟ್ ಆಗಿದ್ದೇವೆ ಎಂದು ಹೇಳುವ ಮೂಲಕ ಗಾಂಧಿನಗರದ ಸುತ್ತಾ ಹರಿದಾಡುತ್ತಿದ್ದ ಉಹಾ ಪೋಹಗಳಿಗೆ ಬ್ರೆಕ್ ಹಾಕಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top