fbpx
ಸಮಾಚಾರ

‘ಗಂಧದಗುಡಿ’ ಕುರಿತಾಗಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ರಿಂದ ಮಹತ್ವದ ನಿರ್ಧಾರ; ವ್ಯಾಪಕ ಮೆಚ್ಚುಗೆ

ಪುನೀತ್ ರಾಜ್‌ಕುಮಾರ್ ನಟನೆಯ ‘ಗಂಧದಗುಡಿ’ ಸಾಕ್ಷ್ಯಚಿತ್ರವನ್ನು ಈಗಾಗಲೇ ಬಹುತೇಕರು ನೋಡಿ ಮೆಚ್ಚಿಕೊಂಡಿದ್ದಾರೆ.. ಈ ಚಿತ್ರವನ್ನು ಎಲ್ಲರೂ ನೋಡಬೇಕು ಎಂದು ಅಪ್ಪು ಕನಸು ಕಂಡಿದ್ದರು. ಹೀಗಾಗಿ ಅಪ್ಪು ಅನುಪಸ್ಥಿತಿಯಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ಪ್ರತಿಯೊಬ್ಬ ಅಪ್ಪು ಅಭಿಮಾನಿಗಳು ಗಂಧದಗುಡಿ ನೋಡಬೇಕು ಅಂತ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕಾಗಿ ಮಲ್ಟಿಫ್ಲೆಕ್ಸ್ ಹಾಗೂ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳಲ್ಲಿ ಗಂಧದಗುಡಿ ಟಿಕೆಟ್ ದರವನ್ನು ಇಳಿಕೆ ಮಾಡಲಿದಿದ್ದಾರೆ. ಇಂದಿನಿಂದ ನಾಲ್ಕು ದಿನಗಳು ಗಂಧದಗುಡಿ ಟಿಕೆಟ್ ಬೆಲೆ ಅರ್ಧಕ್ಕರ್ಧ ಇಳಿಕೆ ಮಾಡಲಾಗಿದೆ.

 

 

ಅಶ್ವಿನಿ ಪುನೀತ್ ರಾಜಕುಮಾರ್ ಮಾಹಿತಿ:
ಈ ಕುರಿತು ಪ್ರಕಟಣೆ ಹೊರಡಿಸಿರುವ ಅಶ್ವಿನಿ ಪುನೀತ್ ರಾಜ್‌ಕುಮಾರ್, ಗಂಧದಗುಡಿ ಅಪ್ಪು ರವರ ಒಂದು ಕನಸು ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ. ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು, ಅದರಲ್ಲೂ ಮಕ್ಕಳು ನೋಡಬೇಕು ಎಂಬುದಾಗಿದೆ. ಈ ಸಲುವಾಗಿ ನಾನು ಹಾಗೂ ಚಿತ್ರ ತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ ನಮ್ಮ ಚಿತ್ರ `ಗಂಧದಗುಡಿ’ಯನ್ನು ನವೆಂಬರ್ 7 ರಿಂದ 10ರ ವರೆಗೆ ಸಿಂಗಲ್ ಸ್ಕ್ರೀನ್ ಥೀಯೇಟರ್ ಗಳಲ್ಲಿ 756 ರೂ.ಗಳಿಗೆ ಹಾಗೂ ಮಲ್ಟಿಪ್ಲೆಕ್ಸ್‌ ಗಳಲ್ಲಿ 112 ರೂ.ಗಳಿಗೆ ಕರ್ನಾಟಕ ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ನಮ್ಮ ಮಕ್ಕಳ ನಾಳೆಗಳಿಗಾಗಿ ಕಾಡನ್ನು ಸಂರಕ್ಷಿಸೋಣ, ಗಂಧದಗುಡಿ ಯನ್ನು ತೋರಿಸೋಣ ಎಂದು ಮಾಹಿತಿ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top